ಎಸ್‌ಡಿಪಿಐ ಬಂಟ್ವಾಳ ಕ್ಷೇತ್ರ ಸಮಿತಿಯಿಂದ ಸಂಸ್ಥಾಪನಾ ದಿನಾಚರಣೆ

Update: 2016-06-23 11:35 GMT

ಬಂಟ್ವಾಳ, ಜೂ. 23: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 8ನೆ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಬಂಟ್ವಾಳ ವಿಧಾನಸಬಾ ಕ್ಷೇತ್ರ ಸಮಿತಿಯ ವತಿಯಿಂದ ಪಕ್ಷದ ಕೈಕಂಬದ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ಧ್ವಜರೋಹಣ ಕಾರ್ಯಕ್ರಮ ನಡೆಯಿತು.

ಧ್ವಜರೋಹಣವನ್ನು ಕ್ಷೇತ್ರ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್. ನೇರವೇರಿಸಿ ಮಾತನಾಡಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೊಡಾಜೆ ಮತ್ತು ಮುಖಂಡ ಯೂಸುಫ್ ಆಲಡ್ಕ ಇದೇ ಸಂದರ್ಭದಲ್ಲಿ ಕೈಕಂಬದಿಂದ ಬಿ.ಸಿ.ರೋಡ್ ವರೆಗೆ ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಜಕದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ದಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ರಾಜ್ಯ ಸಮಿತಿ ಸದಸ್ಯ ಅನ್ವರ್ ಸಾದಾತ್, ಬಂಟ್ವಾಳ ಪುರಸಭೆ ಸದಸ್ಯರಾದ ಇಕ್ಬಾಲ್ ಐ.ಎಂ.ಆರ್., ಮುನೀಶ್ ಅಲಿ, ಮುಖಂಡ ಝಕರಿಯಾ ಕಲ್ಲಡ್ಕ ಉಪಸ್ಥಿತರಿದ್ದರು. ಕ್ಷೇತ್ರ ಸಮಿತಿ ಕಾರ್ಯದರ್ಶಿ ಮುಶ್ತಾಕ್ ತಲಪಾಡಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News