ರಸ್ತೆಯಲ್ಲೇ ಲಾರಿಯನ್ನು ಬಿಟ್ಟು ಪರಾರಿಯಾದ ಮರಳು ಲಾರಿ ಚಾಲಕ

Update: 2016-07-01 16:16 GMT

ಮಂಗಳೂರು, ಜು. 1: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕ ಕೆ.ಎಸ್.ನಾಗೇಂದ್ರಪ್ಪ ಅವರು ಇಲಾಖೆಯ ಇತರ ಸಿಬ್ಬಂದಿಯೊಂದಿಗೆ ಇಂದು ಬೆಳಗ್ಗೆ 5 ಗಂಟೆಗೆ ಕಾವೂರು ಜಂಕ್ಷನ್‌ನಲ್ಲಿ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಾಟದ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾವೂರು ಜಂಕ್ಷನ್‌ನಲ್ಲಿ ವಾಹನಗಳನ್ನು ನಿಲ್ಲಿಸಿ ಪರಿಶೀಲಿಸುತ್ತಿದ್ದಾಗ ವಾಹನವೊಂದರ ಚಾಲಕನೋರ್ವ ವಾಹನವನ್ನು ರಸ್ತೆಯಲ್ಲೇ ಬಿಟ್ಟು ಪರಾರಿಯಾಗಿದ್ದು, ಇಲಾಖೆಯ ಅಧಿಕಾರಿ ಸಮೀಪಕ್ಕೆ ಹೋಗಿ ನೋಡಿದಾಗ ವಾಹನದಲ್ಲಿ ಮರಳು ತುಂಬಿದ್ದು, ಮರಳು ಸಮೇತ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

 ಜೂನ್15ಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಸಾಗಾಟ ಮತ್ತು ಮರಳುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದರೂ ಆರೋಪಿಗಳು ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದು, ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News