ಕಲ್ಲಡ್ಕ: ಗುಡ್ಡ ಜರಿದು ಕುಸಿತದ ಭೀತಿಯಲ್ಲಿ ಮನೆ

Update: 2016-07-05 05:35 GMT

ವಿಟ್ಲ, ಜು.5 : ಬಂಟ್ವಾಳ ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು, ಗುಡ್ಡವೊಂದು ಕುಸಿದ ಪರಿಣಾಮ ಮನೆ ಹಾಗೂ ಪಂಚಾಯತ್ ಕುಡಿಯುವ ನೀರಿನ ಟ್ಯಾಂಕ್ ಕುಸಿದು ಬೀಳುವ ಅಪಾಯಕಾರಿ ಸ್ಥಿತಿ ತಾಲೂಕಿನ ಗೋಳ್ತಮಜಲು ಗ್ರಾಮದ ಕಲ್ಲಡ್ಕ ಸಮೀಪದ ಬಲ್ಲೆಕೋಡಿ ಎಂಬಲ್ಲಿ ಸೋಮವಾರ ನಡೆದಿದೆ. 

ಇಲ್ಲಿನ ನಿವಾಸಿ ಮುಹಮ್ಮದ್ ಎಂಬವರ ಮನೆಯ ಹಿಂಭಾಗದ ಗುಡ್ಡ ಜರಿದು ಬಿದ್ದಿದ್ದು, ಮನೆಯ ಕಂಪೌಂಡ್ಗೆ ಹಾನಿ ಸಂಭವಿಸಿದೆ. ಅಲ್ಲದೆ ಗುಡ್ಡದಲ್ಲಿ ಅಳವಡಿಸಿರುವ ಕುಡಿಯುವ ನೀರಿನ ಟ್ಯಾಂಕ್ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಇನ್ನೇನು ಪರಿಸ್ಥಿತಿ ಬಿಗಡಾಯಿಸಿದರೆ ನೀರಿನ ಟ್ಯಾಂಕ್ ಕುಸಿದು ಬೀಳುವ ಎಲ್ಲ ಸಾಧ್ಯತೆಗಳಿವೆ. ಸುಮಾರು 100ಕ್ಕೂ ಹೆಚ್ಚು ಮನೆಗಳಿಗೆ ಈ ಟ್ಯಾಂಕ್ ನಿಂದ ನೀರು ಪೂರೈಕೆಯಾಗುತ್ತಿದ್ದು, ಪರಿಸರವಾಸಿಗಳು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ತಕ್ಷಣ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News