ಮತ್ತಷ್ಟು ಕುಟುಂಬಗಳು ಬಲಿಯಾಗುವ ಮೊದಲು ಎಚ್ಚೆತ್ತುಕೊಳ್ಳಿ: ಎಚ್‌ಡಿಕೆ ಮನವಿ

Update: 2016-07-12 18:34 GMT

ಬೆಂಗಳೂರು, ಜು.12: ‘ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿ ಸುತ್ತಿಲ್ಲ ಆಗುತ್ತಿಲ್ಲ’ ಎಂದು 2009ರ ಆ.18ರಂದು ಸ್ವಯಂ ನಿವೃತ್ತಿ ಪಡೆದ ವ್ಯಕ್ತಿಯನ್ನು ಗೃಹ ಸಚಿವರು ಸಲಹೆಗಾರರನ್ನಾಗಿ ಇಟ್ಟುಕೊಂಡಿದ್ದೀರಲ್ಲಾ? ಇಂತಹ ಸಲಹೆಗಾರರ ಅಗತ್ಯವಿದೆಯೇ ಎಂದು ಜೆಡಿಎಸ್ ಶಾಸಕಾಂಗ ಪಕ್ಷ ನಾಯಕ ಎಚ್.ಡಿ. ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ.

ಮಂಗಳವಾರ ವಿಧಾನಸಭೆಯಲ್ಲಿ ನಿಯಮ 69ರಡಿ ಸಾರ್ವ ಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪಾವಧಿ ಚರ್ಚೆ ಯಲ್ಲಿ ಮಾತನಾಡಿದ ಅವರು, ಡಿವೈಎಸ್ಪಿ ಗಣಪತಿಯ ವರಂತಹ ಪ್ರಕರಣವನ್ನು ಮುಚ್ಚಿಹಾಕುವ ಕ್ರಿಮಿನಲ್ ಚಟುವಟಿಕೆ ಗಳಿಗೆ ಸಲಹೆಗಾರರನ್ನು ಇಟ್ಟುಕೊಂಡಂತಿದೆ ಎಂದು ಲೇವಡಿ ಮಾಡಿದರು.ೃಹ ಸಚಿವರ ಸಲಹೆಗಾರರ ನಕಲಿ ದಾಖಲೆಗಳ ಬಗ್ಗೆ ಪ್ರಸ್ತಾಪ ಮಾಡುವುದಿಲ್ಲ. ಆ ಕಡತವನ್ನೇ ಅವರು ಸುಟ್ಟು ಹಾಕಿದ್ದಾರೆಂಬ ಮಾತಿದೆ. ಆದರೆ, ಅವರು ಸ್ವಯಂ ನಿವೃತ್ತಿಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಕಾರ್ಯ ನಿರ್ವಹಿಸಲು ಆಗುತ್ತಿಲ್ಲ ಎಂದು ಅರ್ಜಿ ಹಾಕಿದ್ದರು ಎಂದು ಅವರು ದಾಖಲೆ ಪ್ರದರ್ಶಿಸಿದರು.

ಸಿಆರ್‌ಪಿಸಿ-154 ಅಡಿ ಎಫ್‌ಐಆರ್: ಮಂಗಳೂರು ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆಗೆ ಮೊದಲು ಸುದ್ದಿವಾಹಿನಿಗೆ ನೀಡಿದ ಹೇಳಿಕೆಯನ್ನು ಆಧರಿಸಿ ಸಿಆರ್‌ಪಿಸಿ-ಕಲಂ 154 ಅನ್ವಯ ಇಬ್ಬರು ಅಧಿಕಾರಿಗಳು ಹಾಗೂ ಸಚಿವ ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.


ಪ್ರಾಮಾಣಿಕ ಅಧಿಕಾರಿಗಳಿಗೆ ಸರಕಾರ ಯಾವಾಗಲೂ ರಕ್ಷಣೆ ನೀಡುತ್ತದೆ. ಹೀಗಾಗಿ ಮೈಸೂರಿನ ಜಿಲ್ಲಾಧಿಕಾರಿ ದೂರನ್ನು ಆಧರಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಮೂರು ವರ್ಷಗಳಿಂದ ಮೈಸೂರಿನಲ್ಲೇ ಉಳಿಸಿಕೊಂಡಿದ್ದೇವೆ. ತನಿಖೆ ಪ್ರಗತಿಯಲ್ಲಿದ್ದು, ನಾವು ನಿಮ್ಮಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ’
-ಸಿದ್ದರಾಮಯ್ಯ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News