ಸಚಿವ ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆಗೆ ಬಿಜೆಪಿ ಚಿಂತನೆ

Update: 2016-07-12 18:38 GMT

ಬೆಂಗಳೂರು, ಜು.12: ಮಂಗಳೂರಿನ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಕಾರಣವೆನ್ನಲಾದ ಸಚಿವ ಕೆ.ಜೆ.ಜಾರ್ಜ್ ಇನ್ನೆರಡು ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ‘ಮಡಿಕೇರಿಯಿಂದ ಬೆಂಗಳೂರಿಗೆ ಪಾದಯಾತ್ರೆ’ ಕೈಗೊಳ್ಳಲು ಚಿಂತನೆ ನಡೆಸಿದ್ದಾರೆ.

ಮಂಗಳವಾರ ಡಿವೈಎಸ್ಪಿ ಗಣಪತಿ ಆತ್ಮ ಹತ್ಯೆ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ ಬಳಿಕ ನೇರವಾಗಿ ವಿಧಾನ ಸಭೆ ಮೊಗಸಾಲೆಗೆ ಆಗಮಿಸಿದ ಯಡಿಯೂರಪ್ಪ, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಉಪ ನಾಯಕಆರ್. ಅಶೋಕ್ ಹಾಗೂ ಬಿಜೆಪಿ ಶಾಸಕ ರೊಂದಿಗೆ ಸಮಾಲೋಚನೆ ನಡೆಸಿದರು.

ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡುವವರೆಗೂ ಈ ಹೋರಾಟವನ್ನು ಕೈಬಿಡುವುದು ಬೇಡ. ವಿಧಾನ ಸಭೆಯ ಒಳಗೆ ಮತ್ತು ಹೊರಗೆ ಎರಡೂ ಕಡೆ ಪ್ರತಿಭಟನೆ ನಡೆಸುವ ಮೂಲಕ ಗಣಪತಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು. ರಾಜ್ಯ ಸರಕಾರದ ದುರಾಡಳಿತವನ್ನು ಕೊನೆಗಾಣಿಸಬೇಕೆಂದು ಎಲ್ಲ ಶಾಸಕರಿಗೆ ಬಿಎಸ್‌ವೈ ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News