17ರಂದು ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

Update: 2016-07-12 19:01 GMT

ಮಂಗಳೂರು, ಜು.12: ಮಂಗಳೂರು ಪೊಲೀಸ್ ಕಮಿಷನರೇಟ್ೆ ಸಂಬಂಧಿಸಿ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹಾಗೂ ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಈಗಾಗಲೆ ನಡೆಸಿರುವ ಸಹಿಷ್ಣುತೆ/ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಜು.17ರಂದು ಲಿಖಿತ ಪರೀಕ್ಷೆ ನಡೆಯಲಿದೆ.
  ಪರೀಕ್ಷೆಯು ನಗರದ ಸಂತ ಅಲೋಶಿಯಸ್ ಕಾಲೇಜು, ಕೆನರಾ ಪಿಯು ಕಾಲೇಜು, ಕೆನರಾ ಪದವಿ ಕಾಲೇಜು ಹಾಗೂ ಪಾಂಡೇಶ್ವರದ ಶ್ರೀನಿವಾಸ ಕಾಲೇಜಿನಲ್ಲಿ ನಡೆಯಲಿದೆ. ದೇಹದಾರ್ಢ್ಯತೆ/ಸಹಿಷ್ಣುತೆ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಫಲಿತಾಂಶ ಶೀಟ್, ಹಾಜರಾತಿ ಹಾಳೆ ಹಾಗೂ ಗುರುತಿನ ಚೀಟಿಯೊಂದಿಗೆ ಪರೀಕ್ಷೆಗೆ ಹಾಜರಾಗ ಬೇಕು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News