ವೌಢ್ಯ ನಿಷೇಧ ಕಾಯ್ದೆ ಪರಿಷ್ಕರಣೆಗೆ ಸಮಿತಿ ರಚನೆಸಚಿವ ಸಂಪುಟ ತೀರ್ಮಾನ
ಬೆಂಗಳೂರು, ಜು. 13: ಕರ್ನಾಟಕ ನರಬಲಿ ಮತ್ತು ಇತರ ಅಮಾನವೀಯ ದುಷ್ಟ ಮತ್ತು ಅಘೋರಿ ಪದ್ಧತಿಗಳು ಹಾಗೂ ವಾಮಾಚಾರ ಇವುಗಳ ಪ್ರತಿಬಂಧ ಮತ್ತು ನಿರ್ಮೂಲನೆ ವಿಧೇಯಕ-2016ನ್ನು ಪರಿಷ್ಕರಿಸಲು ಸಂಪುಟ ಉಪ ಸಮಿತಿ ರಚಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕಾಯ್ದೆ ಸಂಬಂಧ ಸುದೀರ್ಘವಾಗಿ ಚರ್ಚೆ ನಡೆಸಲಾಯಿತಾದರೂ, ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.ಾಯ್ದೆಗೆ ಸಂಬಂಧಿಸಿದಂತೆ ಮತ್ತಷ್ಟು ಸ್ಪಷ್ಟಣೆ ಅಗತ್ಯವಿರುವ ಕುರಿತು ಹಿರಿಯ ಸಚಿವರು ನೀಡಿದ ಸಲಹೆಯನ್ನು ಪುರಸ್ಕರಿಸಿದ ಮುಖ್ಯಮಂತ್ರಿ, ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಿ ಕಾಯ್ದೆಯನ್ನು ಪರಿಷ್ಕರಿಸಲು ಉದ್ದೇಶಿಸಿದ್ದಾರೆ ಎನ್ನಲಾಗಿದೆ.ದರೆ, ಯಾರ ನೇತೃತ್ವದಲ್ಲಿ ಉಪ ಸಮಿತಿಯನ್ನು ರಚನೆ ಮಾಡಬೇಕು ಎಂಬ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗೆ ನೀಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.