"ಪರಿಸರವನ್ನು ಪ್ರೀತಿಸುವ ಮನೋಭಾವ ಬೆಳೆಸಿ'

Update: 2016-07-18 18:49 GMT

ಉಡುಪಿ, ಜು.18: ಪರಿಸರದಲ್ಲಿ ಶುದ್ಧ ಗಾಳಿ, ಆಮ್ಲಜನಕ ದೊರಕಲು ನಮ್ಮ ಸುತ್ತಲೂ ಮರ-ಗಿಡಗಳಿರಬೇಕು. ಹಸಿರು ಪರಿಸರದಿಂದ ಜೀವಜಾಲ ನಳನಳಿಸಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿ ಗಳು ಪರಿಸರವನ್ನು ಪ್ರೀತಿಸುವ ಮನೋ ಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಿವಶಂಕರ ಬಿ.ಅಮರಣ್ಣನವರ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ ಉಡುಪಿ ವಲಯ ಮತ್ತು ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಪರಿಸರದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಜ್ಜರಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾದ ವನಮಹೋತ್ಸವ ಸಪ್ತಾಹಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

ಗಿಡಗಳನ್ನು ನೆಡುವ ಜೊತೆಗೆ ಅವುಗಳ ನಿರ್ವಹಣೆಯ ಹೊಣೆಯನ್ನು ವಿದ್ಯಾರ್ಥಿ ಗಳು ಅರಿತುಕೊಳ್ಳಬೇಕು. ಮರಗಿಡಗಳನ್ನು ಬೆಳೆಸುವ ಮೂಲಕ ಉತ್ತಮ ಪರಿಸರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು. ಸ್ವತಃ ತಮ್ಮ ಮರಗಳಿಂದಲೇ ಹಣ್ಣು ಹೂವನ್ನು ಪಡೆಯುವ ಮೂಲಕ ಉತ್ತಮ ಆರೋಗ್ಯವನ್ನು ಹೊಂದಲು ಸಾಧ್ಯ ಎಂದರು.

ಈ ಸಂದಭರ್ದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ, ವಕೀಲರ ಸಂಘದ ಅಧ್ಯಕ್ಷ ದಯಾನಂದ, ಅರಣ್ಯ ಇಲಾಖೆಯ ಅಧಿಕಾರಿಗಳಾದ ರಮೇಶ್, ಸತೀಶ್ ಬಾಬಾ ರೈ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News