ನಾಳೆ ಅಮುಕ್ತ್ ವಾರ್ಷಿಕ ಸಮ್ಮೇಳನ

Update: 2016-07-22 18:55 GMT

ಮಂಗಳೂರು, ಜು.22: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಅಧ್ಯಾಪಕರ ಸಂಘ(ಅಮುಕ್ತ್)ದ ವಾರ್ಷಿಕ ಸಮ್ಮೇಳನ ಜು.24ರಂದು ಪೂರ್ವಾಹ್ನ 11:30ರಿಂದ ಮಂಗಳೂರಿನ ಸಂತ ಆ್ಯಗ್ನೆಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯ ಮಹಿಳಾ ವಿವಿ ಕುಲಪತಿ ಪ್ರೊ.ಸಬಿಹಾ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಇದೇ ವೇಳೆ ಈ ಶೈಕ್ಷಣಿಕ ವರ್ಷದಲ್ಲಿ ನಿವೃತ್ತಿ ಹೊಂದಿದ, ಪಿಎಚ್‌ಡಿ ಪಡೆದ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಪ್ರಾಧ್ಯಾಪಕರನ್ನು ಸನ್ಮಾನಿಸಲಾಗುವುದು. ಅಮುಕ್ತ್ ವಾರ್ಷಿಕ ಮಹಾಸಭೆಯೂ ಜು.24ರಂದು ಬೆಳಗ್ಗೆ 10 ಗಂಟೆಗೆ ಸಂತ ಆ್ಯಗ್ನೆಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News