ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ, ಗಿಡ ವಿತರಣೆ

Update: 2016-07-23 11:38 GMT

ಕೊಣಾಜೆ, ಜು.23: ಕೊಣಾಜೆಪದವು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಔಷಧೀಯ ಸಸ್ಯಗಳ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ ಶುಕ್ರವಾರ ಶಾಲಾ ಸಭಾಂಗಣದಲ್ಲಿ ನಡೆಯಿತು.

ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಶೌಕತ್ ಅಲಿ ಕಾರ್ಯಕ್ರಮ ಉದ್ಘಾಟಿಸಿದರು. ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಉಪಾಧ್ಯಕ್ಷ ಪ್ರೇಮನಾಥ ಆಳ್ವ ಅಧ್ಯಕ್ಷತೆ ವಹಿಸಿದ್ದರು. ನಾಟಿವೈದ್ಯ ಶಂಕರಾನಂದ ಎನ್.ಇನವಳ್ಳಿ ಹಾಗೂ ದಿನೇಶ್ ನಾಯ್ಕ ವಿಟ್ಲ ಸಸ್ಯ ಶ್ಯಾಮಲ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಹೆಗ್ಡೆ, ತಾಲೂಕು ಪಂಚಾಯತ್ ಸದಸ್ಯೆ ಪದ್ಮಾವತಿ ಎಸ್., ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಪ್ರಸಾದ್ ರೈ ಕಳ್ಳಿಮಾರ್, ಮಂಗಳೂರು ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷೆ ಆಶಾಲತಾ ಸುವರ್ಣ, ಕೊಣಾಜೆ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಅಚ್ಚುತ ಗಟ್ಟಿ, ವೇದಾವತಿ, ಮುತ್ತು ಶೆಟ್ಟಿ, ನಝರ್ ಷಾ, ರಾಜೀವಿ, ಅಭಿವೃದ್ಧಿ ಅಧಿಕಾರಿ ಕೇಶವ ಪೂಜಾರಿ ಕಿಲ್ಲೂರು ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News