ಮನಪಾ ಕಮಿಷನರ್‌ರಿಗೆ ಮಾತೃ ವಿಯೋಗ

Update: 2016-07-24 22:49 IST
  • whatsapp icon

ಮಂಗಳೂರು, ಜು. 24: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಮುಹಮ್ಮದ್ ನಝೀರ್ ಅವರ ತಾಯಿ ಬಜ್ಪೆ ನಿವಾಸಿ ಬಿ.ಫಾತಿಮಾ ಅವರು ಇಂದು ಸಂಜೆ ನಿಧನ ಹೊಂದಿದರು.

ಅವರಿಗೆ 69 ವರ್ಷ ವಯಸ್ಸಾಗಿತ್ತು. ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಸಹಿತ ಬಂಧು, ಮಿತ್ರರನ್ನು ಅಗಲಿದ್ದಾರೆ.

ಕಳೆದ ಮೂರುವರೆ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಂಜೆ ಸುಮಾರು 5:30ಕ್ಕೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News