ಧಮ್ಕಿ ಹಾಕಿ ಎಸಿ ಪ್ರಕರಣವನ್ನು ಮುಚ್ಚಿ ಹಾಕುವ ಕುತಂತ್ರ: ಎಚ್.ಡಿ. ರೇವಣ್ಣ ಆರೋಪ

Update: 2016-07-26 13:47 GMT

ಹಾಸನ, ಜು.26: ಅಧಿಕಾರಿಗಳ ಮೇಲೆ ಧಮಕಿ ಹಾಕಿ ಎಸಿ ಆತ್ಮಹತ್ಯೆ ಯತ್ನ ಪ್ರಕರಣವನ್ನು ಮುಚ್ಚಿ ಹಾಕುವ ಕುತಂತ್ರ ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಆರೋಪಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪವಿಭಾಗಾಧಿಕಾರಿ ಆತ್ಮಹತ್ಯೆ ವಿಚಾರವಾಗಿ ಕೆಲ ದಿನಗಳ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವಿಧಾನ ಪರಿಷತ್ ಸದಸ್ಯರ ಹೇಳಿಕೆಯನ್ನು ಗಮನಿಸಿದೆ. ಆದರೇ ಅಂದು ನಡೆದ ಘಟನೆ ಬಗ್ಗೆ ಎಎಸ್ಪಿ ಶೋಭಾರಾಣಿ ಹೇಳಿದ್ದನ್ನು ನಾನು ಹೇಳಿದ್ದೇನೆ ಅಷ್ಟೆ. ನಾನು ಯಾವ ಅಧಿಕಾರದ ಹತಾಶೆಯಿಂದ ಹೇಳಿಕೆ ನೀಡಿಲ್ಲ. ಹಾಗೂ ಅವಶ್ಯಕತೆ ಇಲ್ಲ ಎಂದರು.

ಸಚಿವರು ಸೇರಿ ಅಧಿಕಾರಿಗಳ ಮೇಲೆ ಧಮಕಿ ಹಾಕಿ ಎಸಿ ಪ್ರಕರಣವನ್ನು ಮುಚ್ಚಿ ಹಾಕುವ ಕುತಂತ್ರ ನಡೆಸಲಾಗುತ್ತಿದೆ ಎಂದು ದೂರಿದರು. ಅದೆ ರೀತಿ ಎಸಿ ಹೇಳಿಕೆ ಕೊಡದಂತೆ ಕಡಿವಾಣ ಕೂಡ ಹಾಕಿರುವುದಾಗಿ ಹೇಳಿದ ಅವರು, ಕೂಡಲೇ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೂ ಒತ್ತಡ ಹೇರಲಾಗಿದೆ. ನಿರ್ಭಯವಾಗಿ ಕೆಲಸ ಮಾಡಲು ಅವಕಾಶ ಕೊಡುತ್ತಿಲ್ಲ ಎಂದರು. ವಿಜಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅವರು ಅಧಿಕಾರಕ್ಕೆ ಬಂದ ದಿನದಿಂದ ತನಿಖೆಗೆ ಒಳಪಡಿಸಬೇಕು ಎಂದು ಹೇಳಿದರು.

ಕ್ಷೇತ್ರದ ಶಾಸಕ ಎಚ್.ಎಸ್. ಪ್ರಕಾಶ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಸನದ ಎಸಿ ಬಗ್ಗೆ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಮೊದಲು ಅವರ ಹುದ್ದೆ ಘನತೆಗೆ ತಕ್ಕ ಹಾಗೆ ಮಾತನಾಡಬೇಕು ಈ ರೀತಿ ತಮಾಷೆಯಾಗಿ ಮಾತನಾಡಬಾರದು ಎಂದು ಸಲಹೆ ನೀಡಿದರು.

ಇದೆ ವೇಳೆ ಎಚ್.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಹೊನ್ನವಳ್ಳಿ ಸತೀಶ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News