ಮಹಾದಾಯಿ ಯೋಜನೆ- ರಾಜ್ಯಗಳ ಬಗ್ಗೆ ಕೇಂದ್ರ ಸರಕಾರ ನಿರ್ಲಕ್ಷ್ಯ: ಯು.ಟಿ.ಖಾದರ್

Update: 2016-07-30 11:39 GMT

ಮಂಗಳೂರು, ಜು.30: ಮಹಾದಾಯಿ ಯೋಜನೆಯ ಬಗ್ಗೆ ನ್ಯಾಯಾಲಯದ ತೀರ್ಪು ದುರಾದೃಷ್ಟಕರ. ಈ ವಿಚಾರದಲ್ಲಿ ಕೇಂದ್ರ ಸರಕಾರ ಸಂಪೂರ್ಣ ನಿಲರ್ಕ್ಷ ವಹಿಸಿದೆ ಎಂದು ರಾಜ್ಯ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಯು.ಟಿ.ಖಾದರ್ ಟೀಕಿಸಿದ್ದಾರೆ.

ಅವರು ಇಂದು ನಗರದಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಮಹಾದಾಯಿ ಯೋಜನೆಯ ಪ್ರಕಾರ ನದಿ ನೀರಿನ ಹಂಚಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಬಹುದಿತ್ತು. ಕರ್ನಾಟಕದ ಲೋಕಸಭಾ ಸದಸ್ಯರ ಅಭಿಪ್ರಾಯವನ್ನಾದರೂ ಪಡೆದುಕೊಳ್ಳಬೇಕಾಗಿತ್ತು. ಇದಾವುದನ್ನು ಮಾಡದೆ ಇದ್ದ ಪರಿಣಾಮವಾಗಿ ಪ್ರಸಕ್ತ ರಾಜ್ಯದ ಜನತೆಗೆ ಅನ್ಯಾಯ ಜನರು ಬೀದಿಗಿಳಿದಿದ್ದಾರೆ. ಇನ್ನು ಮುಂದಾದರೂ ಈ ಬಗ್ಗೆ ಕೇಂದ್ರ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಬೇಕಾಗಿದೆ. ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಕಾನೂನು ಚೌಕಟ್ಟಿನಲ್ಲಿ ಮುಂದಿನ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News