ಇನ್ನೊಬ್ಬ ಆಪ್‌ ಎಂಎಲ್‌ಎ ಅರೆಸ್ಟ್‌

Update: 2016-07-31 06:21 GMT

ಹೊಸದಿಲ್ಲಿ, ಜು.31: ಆಮ್‌ ಆದ್ಮಿ ಪಕ್ಷದ ಕಾರ್ಯಕರ್ತೆ ಸೋನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇನ್ನೊಬ್ಬ ಆಪ್‌ ಶಾಸಕನನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ.
ನರೇಲಾ ಕ್ಷೇತ್ರದ  ಶಾಸಕ ಶರದ್ ಚೌಹಾನ್‌ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಇದರೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ ಹನ್ನೆರಡಕ್ಕೆ ಏರಿದೆ. ಸೋನಿ ಜುಲೈ 19ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News