ಮುಂಬೈನಲ್ಲಿ ಮೂರಂತಸ್ತಿನ ಕಟ್ಟಡ ಕುಸಿತ; ಆರು ಸಾವು

Update: 2016-07-31 08:26 GMT

ಮುಂಬೈ,ಜು.31: ಇಲ್ಲಿನ ಭಿವಂಡಿಯ  ಜೆಬಿ ನಗರದ ಮೂರಂತಸ್ತಿನ ಕಟ್ಟಡವೊಂದು  ಇಂದು ಕುಸಿದು ಬಿದ್ದ ಪರಿಣಾಮ ಆರು ಮಂದಿ ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ.
ಕಟ್ಟಡದ ಅವಶೇಷದಡಿಯಲ್ಲಿ ಸಿಲುಕಿಕೊಂಡ ಹನ್ನೆರಡು  ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ ಇಪ್ಪತ್ತಕ್ಕೂ ಅಧಿಕ ಮಂದಿ ಸಿಲುಕಿರಬೇಕೆಂದು ಶಂಕಿಸಲಾಗಿದೆ.
ಭಾರೀ ಮಳೆಗೆ ಕಟ್ಟಡ ಬೆಳಗ್ಗಿನ ಜಾವ ಕುಸಿದು ಬಿದ್ದಿದೆ.ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್‌) ಕಾರ್ಯಾಚರಣೆ ನಡೆಸುತ್ತಿದ್ದು, ಭಾರೀ ಮಳೆ ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ಜಿಲ್ಲಾಧಿಕಾರಿ ಡಾ.ಮಹೇಂದ್ರ ಕಲ್ಯಾಣ್‌ಕರ್‌ ಸ್ಥಳಕ್ಕೆ ಧಾವಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News