ಉನ್ನತ ನ್ಯಾಯಾಂಗದಲ್ಲಿ ಮೀಸಲಾತಿಯ ಯಾವುದೇ ಪ್ರಸ್ತಾವ ಸದ್ಯಕ್ಕಿಲ್ಲ: ಪ್ರಸಾದ್

Update: 2016-08-04 17:28 GMT

ಹೊಸದಿಲ್ಲಿ,ಆ.4: ಉನ್ನತ ನ್ಯಾಯಾಂಗದಲ್ಲಿ ಮೀಸಲಾತಿಯನ್ನು ಕಲ್ಪಿ ಸಲು ಸಂವಿಧಾನಕ್ಕೆ ತಿದ್ದು ಪಡಿ ತರುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರಕಾರದ ಮುಂದಿಲ್ಲ, ಆದರೆ ಎಂದಾದರೂ ಈ ವಿಚಾರದ ಬಗ್ಗೆ ಗಮನ ಹರಿಸುವ ಅಗತ್ಯವಿದೆ ಎಂದು ಕಾನೂನು ಸಚಿವ ರವಿಶಂಕರ ಪ್ರಸಾದ್ ಅವರು ಗುರುವಾರ ಲೋಕಸಭೆಯಲ್ಲಿ ತಿಳಿಸಿದರು.

ನ್ಯಾಯಾಧೀಶರ ನೇಮಕಗಳಿಗಾಗಿ ಪ್ರಸ್ತಾವನೆ ಗಳನ್ನು ಕಳುಹಿಸುವಾಗ ಇತರರೊಂದಿಗೆ ಹಿಂದು ಳಿದ ವರ್ಗಗಳಿಗೆ ಸೇರಿದವರಿಗೆ ಸೂಕ್ತ ಪ್ರಾಶಸ್ತ್ಯ ನೀಡುವಂತೆ ಉಚ್ಚ ನ್ಯಾಯಾಲಯಗಳ ಮುಖ್ಯ ನ್ಯಾಯಾಧೀಶರನ್ನು ತಾನು ಕೋರಿಕೊಂಡಿದ್ದೇನೆ ಎಂದರು.
ಸಂವಿಧಾನದ 124 ಮತ್ತು 217ನೆ ಅನುಚ್ಛೇದಗಳಡಿ ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯಗಳ ನ್ಯಾಯಾ ಧೀಶರನ್ನು ನೇಮಿಸಲಾಗುತ್ತಿದ್ದು, ಇವುಗಳಲ್ಲಿ ಯಾವುದೇ ಜಾತಿ ಅಥವಾ ವರ್ಗದ ವ್ಯಕ್ತಿಗಳಿಗೆ ಮೀಸಲಾತಿಯನ್ನು ಒದಗಿಸಲಾಗಿಲ್ಲ ಎಂದು ಸಚಿವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News