ಅಂಗನವಾಡಿ ಕಾರ್ಯಕರ್ತೆ- ಸಹಾಯಕಿಯರ ನೇಮಕಾತಿ

Update: 2016-08-05 18:01 GMT

ಮಂಗಳೂರು, ಆ.5: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಮಂಗಳೂರು (ನಗರ) ವ್ಯಾಪ್ತಿಯ ವಿವಿಧ ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕುದ್ರೋಳಿ ಬೆಂಗ್ರೆ, ಬಜಾಲ್ ಶಾಂತಿನಗರ ಅಂಗನವಾಡಿಗಳ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿದಾರರು ಎಸೆಸೆಲ್ಸಿ ಉತ್ತೀರ್ಣರಾಗಿರಬೇಕು. ಅಂಗನವಾಡಿ ಸಹಾಯಕಿಯರ ಹುದ್ದೆಗೆ ಪದವು ಶಕ್ತಿ ಫ್ರೆಂಡ್ಸ್ ಸರ್ಕಲ್, ಬಜಾಲ್ ಜಯನಗರ, ಕಾನಾ, ಹೊಸಬೆಟ್ಟು, ಬದ್ರಿಯಾ ಶಾಲೆ ಕಂದಕ್, ಬಂದರು, ಫ್ರೆಂಡ್ಸ್ ಸರ್ಕಲ್ 3ನೆ ವಿಭಾಗ ಕಾಟಿಪಳ್ಳ ಹಾಗೂ ಆನಂದನಗರ ಆಕಾಶಭವನ ಅಂಗನವಾಡಿಗಳ ಸಹಾಯಕಿಯರ ಹುದ್ದೆಗೆ 4ನೇ ತರಗತಿಯಿಂದ 9ನೆ ತರಗತಿವರೆಗೆ ವಿದ್ಯಾಭ್ಯಾಸವುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 23.
   ಹೆಚ್ಚಿನ ಮಾಹಿತಿಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸಿಲ್ವರ್ ಕ್ರಾಸ್ ರೋಡ್ ವೆಲೆನ್ಸಿಯಾ, ಬಿಷಪ್ ವಿಕ್ಟರ್ ಅಡ್ಡರಸ್ತೆ, ಮಂಗಳೂರು ಇವರನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News