ಕೋಡಿ: ಬ್ಯಾರೀಸ್ ಕಾಲೇಜಿನಲ್ಲಿ ಎನ್ನೆಸ್ಸೆಸ್ ಘಟಕ ಉದ್ಘಾಟನೆ

Update: 2016-08-06 05:33 GMT

ಕುಂದಾಪುರ, ಆ.6: ರಾಷ್ಟ್ರೀಯ ಸೇವಾ ಯೋಜನೆಯು ಕೇವಲ ಅಂಕಗಳಿಗೆ ಮಾತ್ರವಲ್ಲ, ಅಂಕದಾಚೆಗಿರುವ ಲಾಭಗಳನ್ನು ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು ಎಂದು ಕೆರಾಡಿ ವರಸಿದ್ದಿವಿನಾಯಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಭಾಶ್ಚಂದ್ರ ಶೆಟ್ಟಿ ಹೇಳಿದ್ದಾರೆ.

ಅವರು ಕೋಡಿಯ ಬ್ಯಾರೀಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡಲ್ಲಿ ಬದುಕಿನ ನಾಯಕರಾಗುತ್ತಾರೆ. ರಾಷ್ಟ್ರೀಯ ಸೇವಾ ಯೋಜನೆಯಡಿ ಸಾಧ್ಯವಾದಷ್ಟು ಜನ ಜಾಗೃತಿ ಕಾರ್ಯಕ್ರಮವನ್ನು ರೂಪಿಸಿ ಸಮಾಜಕ್ಕೆ ಸಾಧ್ಯವಾದಷ್ಟು ಸೇವೆ ನೀಡಬೇಕು. ಯೋಜನೆಯ ಮೂಲಕ ಸೇವಾ ಮನೋಭಾವ, ನಾಯಕತ್ವ ಗುಣ ಹಾಗೂ ಬೇರೊಬ್ಬರ ನೋವಿಗೆ ಸ್ಪಂದಿಸುವ ಗುಣಗಳನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಮಾಸ್ಟರ್ ಮೆಹಮೂದ್ ಮಾತನಾಡಿ ಶುಭ ಹಾರೈಸಿದರು. ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶಮೀರ್, ರಾ.ಸೇ.ಯೋಜನಾಧಿಕಾರಿ ವಿದ್ಯಾಧರ್ ಪೂಜಾರಿ ಉಪಸ್ಥಿತರಿದ್ದರು.

ಯೋಜನಾಧಿಕಾರಿ ವಿದ್ಯಾಧರ್ ಪೂಜಾರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ ಕವನ ವಂದಿಸಿ, ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಅಶ್ವತಿ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News