ಜಾತಿ ಗಣತಿ: ಸರಕಾರದಿಂದ ತಜ್ಞರ ಸಮಿತಿ ರಚನೆ

Update: 2016-08-10 18:28 GMT

ಹೊಸದಿಲ್ಲಿ,ಆ.10: ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿಯಲ್ಲಿ ಉಲ್ಲೇಖಿಸಲಾಗಿರುವ ಜಾತಿ ಹೆಸರುಗಳನ್ನು ವರ್ಗೀಕರಿಸಲು ತಜ್ಞರ ಸಮಿತಿಯೊಂದನ್ನು ಸರಕಾರವು ರಚಿಸಿದೆ ಎಂದು ಸಹಾಯಕ ಗೃಹಸಚಿವ ಹಂಸರಾಜ್ ಆಹೀರ್ ಅವರು ಬುಧವಾರ ರಾಜ್ಯಸಭೆಯಲ್ಲಿ ತಿಳಿಸಿದರು. ಲಿಖಿತ ಪ್ರಶ್ನೆಯೊಂದಕ್ಕೆ ನೀಡಿದ ಉತ್ತರದಲ್ಲಿ,ಗಣತಿಯಲ್ಲಿ ಸಮೀಕ್ಷೆ ಮಾಡಲಾದ ಜಾತಿ ಸಂಬಂಧಿತ ಮಾಹಿತಿಯನ್ನು ಇನ್ನೂ ಬಿಡುಗಡೆಗೊಳಿಸಿಲ್ಲ ಎಂದು ತಿಳಿಸಿದ ಅವರು,ಜಾತಿ ಹೆಸರುಗಳ ವರ್ಗೀಕರಣಕ್ಕಾಗಿ ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ ಪನಗಾರಿಯಾ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News