ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದಿಲ್ಲಿ ಆಸ್ಪತ್ರೆಯಿಂದ ಬಿಡುಗಡೆ

Update: 2016-08-14 05:55 GMT

ಹೊಸದಿಲ್ಲಿ, ಆ.14: ಅನಾರೋಗ್ಯ ಹಾಗೂ ಭುಜ ನೋವಿಗಾಗಿ ದಿಲ್ಲಿಯ ಗಂಗಾ ರಾಮ್ ಆಸ್ಪತ್ರೆಯಲ್ಲಿ ಕಳೆದ 11 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ರವಿವಾರ ಬೆಳಗ್ಗೆೆ ಆಸ್ಪತ್ರೆಯಿಂದ ಬಿಡುಗಡೆಯಾದರು.

‘‘ಆಸ್ಪತ್ರೆಯಿಂದ ಬಿಡುಗಡೆಯಾಗುವಾಗ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರಿಗೆ ವಿಶ್ರಾಂತಿ ಪಡೆಯಲು ಸಲಹೆ ನೀಡಲಾಗಿದೆ. ಔಷಧಿಗಳನ್ನು ಮುಂದುವರಿಸಲು ತಿಳಿಸಲಾಗಿದೆ. ಮುಂದಿನ ವಾರ ಅವರು ಆರೋಗ್ಯದ ತಪಾಸಣೆಗಾಗಿ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ’’ ಎಂದು ಗಂಗಾರಾಮ್ ಆಸ್ಪತ್ರೆಯ ಅಧ್ಯಕ್ಷ ಡಿ.ಎಸ್. ರಾಣಾ ಹೇಳಿದ್ದಾರೆ.

ಆ.2 ರಂದು ವಾರಣಾಸಿಯಲ್ಲಿ ನಡೆದ ರೋಡ್‌ಶೋ ವೇಳೆ ಸೋನಿಯಾ ಗಾಂಧಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಆಗ ರೋಡ್ ಶೋ ಮೊಟಕುಗೊಳಿಸಿದ್ದ ಅವರು ಅದೇ ದಿನ ದಿಲ್ಲಿಯ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಆ.3 ರಂದು ಎಡ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸೋನಿಯಾ ಗಾಂಧಿ ಅವರಿಗೆ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News