ಮಾದಕ ವ್ಯಸನದ ಬಗ್ಗೆ ಜಾಗೃತರಾಗಲು ವಿದ್ಯಾರ್ಥಿಗಳಿಗೆ ಕರೆ

Update: 2016-08-15 08:58 GMT

ವಿಟ್ಲ, ಆ.15: ಮಾದಕ ದ್ರವ್ಯಗಳ ದಾಸರಾಗುವಂತಹ ದುಶ್ಚಟಗಳಿಂದ ವಿದ್ಯಾರ್ಥಿಗಳು ಬಹಳಷ್ಟು ಜಾಗರೂಕರಾಗಬೇಕೆಂದು ಬಂಟ್ವಾಳ ಪುರಸಭಾ ಸದಸ್ಯ ಮುಹಮ್ಮದ್ ಇಕ್ಬಾಲ್ ಗೂಡಿನಬಳಿ ವಿದ್ಯಾರ್ಥಿಗಳನ್ನು ಎಚ್ಚರಿಸಿದ್ದಾರೆ. ಬಂಟ್ವಾಳ ಮೂಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ದೇಶದ 70ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಇಂದು ಮಾದಕ ವ್ಯಸನಿಗಳು ಬಹುವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಕಾರ್ಯಾಚರಿಸುತ್ತಿದ್ದು, ಇದನ್ನು ವಿದ್ಯಾರ್ಥಿ ಸಮುದಾಯ ಗಂಭೀರವಾಗಿ ಪರಿಗಣಿಸಬೇಕು ಎಂದರು. ಕಾಲೇಜು ಪ್ರಾಂಶುಪಾಲೆ ಸರಸ್ವತಿ ಅಧ್ಯಕ್ಷತೆ ವಹಿಸಿದ್ದರು. ಪುರಸಭಾ ಸದಸ್ಯರಾದ ಜಗದೀಶ ಕುಂದರ್, ಗೋಪಾಲ ಪೂಜಾರಿ ಅಲೆತ್ತೂರು, ಲೋಲಾಕ್ಷ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಮುಹಮ್ಮದ್ ಗೂಡಿನಬಳಿ, ಸುಧಾಕರ ಮಡಿವಾಳ, ಶ್ರೀಧರ ಅಮೀನ್, ಸತೀಶ್ ಕುಲಾಲ್, ರಮೇಶ್ ಪೂಜಾರಿ, ಲತೀಫ್ ಖಾನ್, ಮುಹಮ್ಮದ್ ಅಶ್ರಫ್ ಜಿ.ಕೆ., ಪತ್ರಕರ್ತರಾದ ಪಿ.ಎಂ.ಅಶ್ರಫ್ ಪಾಣೆಮಂಗಳೂರು, ಯು. ಮುಸ್ತಫಾ ಆಲಡ್ಕ ಮುಖ್ಯ ಅತಿಥಿಗಳಾಗಿ ಬಾಗವಹಿಸಿದ್ದರು. ಉಪನ್ಯಾಸಕರಾದ ಯೂಸುಫ್ ವಂದಿಸಿ, ಅಬ್ದುರ್ರಝಾಕ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News