ಗ್ರೀನ್ ವ್ಯಾಲಿ ನ್ಯಾಷನಲ್ ಸ್ಕೂಲ್ ಮತ್ತು ಪಿಯು ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Update: 2016-08-15 14:25 GMT

   ಉಡುಪಿ, ಆ.15: ಶಿರೂರಿನ ಗ್ರೀನ್ ವ್ಯಾಲಿ ನ್ಯಾಷನಲ್‌ಸ್ಕೂಲ್ ಮತ್ತು ಪಿಯು ಕಾಲೇಜಿನ ವತಿಯಿಂದ ನಡೆದ 70 ನೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಬೆಳಗ್ಗೆ 8:30ಕ್ಕೆ ಗ್ರೀನ್ ವ್ಯಾಲಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕರಾದ ಸೈಯದ್ ಅಬ್ದುಲ್ ಖಾದರ್ ಬಾಶು ರಾಷ್ಟ್ರ ಧ್ವಜಾರೋಹಣಗೈದರು.

ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆ,ರಾಷ್ಟ್ರ ಧ್ವಜಕ್ಕೆ ಗೌರವವಂದನೆ ದೇಶಭಕ್ತಿ ಗೀತೆಗಳನ್ನು ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಡಿದರು.ನಂತರ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ನಾಯಕ ಮುಹಮ್ಮದ್ ಸುಹೈಲ್ ಸಭಾಸದರನ್ನು ಸ್ವಾಗತಿಸಿ ಮಾತನಾಡಿ,ದೇಶಭಕ್ತಿಯ ವೌಲ್ಯವನ್ನು ಎತ್ತಿ ಹಿಡಿಯುವಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಮತ್ತು ಭವಿಷ್ಯದ ನಾಗರಿಕರಾದ ಇಂದಿನ ವಿದ್ಯಾರ್ಥಿಗಳು ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸುವ ಅಗತ್ಯವಿದೆ ಎಂದರು.

 ಪ್ರಾಂಶುಪಾಲ ಜಾನ್ ಮಾಥ್ಯೂ ಮಾತನಾಡಿ, ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಶ್ರೇಷ್ಠ ನಾಯಕರ ತ್ಯಾಗ ಬಲಿದಾನಗಳನ್ನು ವಿದ್ಯಾರ್ಥಿಗಳು ಸ್ಮರಿಸಿಕೊಳ್ಳುವ ಅಗತ್ಯವಿದೆ ಮತ್ತು ದೇಶದ ಅಭಿವೃದ್ಧಿ, ಅಭುದ್ಯಯ ಮತ್ತು ಏಕತೆಯ ವೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ತುಂಬಾ ಜವಾಬ್ದಾರಿಯುತವಾಗಿ ಅರಿತುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಅವರು ಕರೆ ನೀಡಿದರು.

ಧ್ವಜಾರೋಹಣ ಕಾರ್ಯಕ್ರಮದ ಬಳಿಕ ವರ್ಣರಂಜಿತ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆ ಜರಗಿತು.ದೇಶಾಭಿಮಾನ ಮತ್ತು ರಾಷ್ಟ್ರೀಯತೆ ಭಾವನೆಗಳಿಗೆ ಸ್ಫೂರ್ತಿ ನೀಡುವ ಇಂಪಾದ ದೇಶಭಕ್ತಿ ಗೀತೆಗಳನ್ನು ವಿದ್ಯಾರ್ಥಿಗಳು ಹಾಡಿದರು.

ಸಮಾರಂಭದಲ್ಲಿ ವಿದ್ಯಾರ್ಥಿ ನಾಯಕಿ ಸಮ್ಮೆ ತಂಗಲ್ ,ಟ್ರಸ್ಟಿಗಳಾದ ರೈಯಾನ್ ಸೈಯದ್ ,ರಾನಿಯ ಸೈಯದ್ ,ದೀನಾ ಸೈಯದ್,ಶಿಕ್ಷಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ದ್ವಿತೀಯ ಪಿಯುಸಿಯ ಸನತ್  ಪ್ರಾಸ್ತಾವಿಕವಾಗಿ ಮಾತನಾಡಿ,ಖದೀಜಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News