ಆ.21: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ದ.ಕ ಜಿಲ್ಲೆಗೆ ಭೇಟಿ; ನಳಿನ್

Update: 2016-08-18 18:27 GMT


ಮಂಗಳೂರು, ಆ.18: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆ.21ರಂದು ದ.ಕ ಜಿಲ್ಲೆಗೆ ಭೇಟಿ ನೀಡಲಿದ್ದು, 70ನೆ ಸ್ವಾತಂತ್ರೋತ್ಸವ ಬಲಿದಾನ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಮಿತ್ ಶಾ ಅಂದು ಬೆಳಗ್ಗೆ 4:30ಕ್ಕೆ ರೈಲಿನ ಮೂಲಕ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಆಗಮಿಸುವರು. ಬೆಳಗ್ಗೆ 10ಕ್ಕೆ ನಗರದ ಪಿವಿಎಸ್ ವೃತ್ತ ಬಳಿಯ ಬಿಜೆಪಿ ಕಚೇರಿ ಮುಂಭಾಗದಲ್ಲಿ ‘ಗಿಡ ನೆಡಿ ಪರಿಸರ ಉಳಿಸಿ’ ಕಾರ್ಯಕ್ರಮದಲ್ಲಿ ಗಿಡ ನೆಡಲಿದ್ದಾರೆ. 10:20ಕ್ಕೆ ನಗರದ ಮಹಾವೀರ (ಪಂಪ್‌ವೆಲ್) ವೃತ್ತದಲ್ಲಿ ತಿರಂಗಾ ಯಾತ್ರೆಯ ಬೃಹತ್ ವಾಹನ ರ್ಯಾಲಿ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 11ಕ್ಕೆ ಉಳ್ಳಾಲದಲ್ಲಿ ರಾಣಿ ಅಬ್ಬಕ್ಕನ ಪ್ರತಿಮೆಗೆ ಹಾರಾರ್ಪಣೆ ಮುಖಾಂತರ ‘ಬಲಿದಾನ ಸ್ಮರಣೆ’ ಕಾರ್ಯಕ್ರಮ ನಡೆಯಲಿದೆ. 11:30ಕ್ಕೆ ಕೊಣಾಜೆಯ ಮಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ‘ತಿರಂಗಾ ಯಾತ್ರೆಯ ಬೃಹತ್ ಸಾರ್ವಜನಿಕ ಸಭೆ’ ನಡೆಯಲಿದೆ ಎಂದು ಅವರು ಹೇಳಿದರು.
ಈ ಸಂದರ್ಭ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಚೌಟ, ಸುದರ್ಶನ್ ಮೂಡುಬಿದಿರೆ, ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಚಂದ್ರಹಾಸ ಉಳ್ಳಾಲ್, ಜಿತೇಂದ್ರ ಕೊಟ್ಟಾರಿ, ವಿಕಾಸ್ ಪುತ್ತೂರು, ರಾಜೇಶ್ ಕೊಟ್ಟಾರಿ, ವೇದವ್ಯಾಸ ಕಾಮತ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News