‘ನಾರಾಯಣ ಗುರುಗಳ ಸಂದೇಶ ಪಾಲನೆ ಅವಶ್ಯ’

Update: 2016-08-19 18:55 GMT


ಬೆಳ್ತಂಗಡಿ, ಆ.19: ಸಂಸ್ಕಾರಯುತ ಶಿಕ್ಷಣದಿಂದ ಸಮಾಜವನ್ನು ಬಲಿಷ್ಠಗೊಳಿಸುವ ಹಾಗೂ ಪರಿವರ್ತಿಸುವ ನಾರಾಯಣ ಗುರುಗಳ ಸಂದೇಶವನ್ನು ಎಲ್ಲರೂ ಪಾಲಿಸಬೇಕಾಗಿದೆ ಎಂದು ಕನ್ಯಾಡಿ ಶ್ರೀ ಗುರುದೇವ ಮಠಾಧಿಪತಿ, ನಿತ್ಯಾನಂದ ನಗರ ಶ್ರೀರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಹೇಳಿದರು.

ಶುಕ್ರವಾರ ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 162ನೆ ಗುರುಜಯಂತಿ ಹಾಗೂ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಮತ್ತು ದೀಕ್ಷಾಗ್ರಂಥಿ ಧಾರಣೆ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.

ಬಿಲ್ಲವ ಮಹಾಮಂಡಲ ವಕ್ತಾರ ಹರಿಕೃಷ್ಣ ಬಂಟ್ವಾಳ ಪ್ರಧಾನ ಭಾಷಣ ಮಾಡಿದರು.
ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ ಕಾರ್ಯಕ್ರಮ ಉದ್ಘಾಟಿಸಿದರು.
ಸಂಘದ ಅಧ್ಯಕ್ಷ ಭಗೀರಥ ಜಿ. ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ವೇದಿಕೆ ಅಧ್ಯಕ್ಷೆ ತನುಜಾ ಶೇಖರ್ ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ಸಂತೋಷ್ ಕುಮಾರ್ ಸ್ವಾಗತಿಸಿದರು. ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಚಿದಾನಂದ ಇಡ್ಯ ವಂದಿಸಿದರು. ಪದ್ಮನಾಭ ಸಾಲ್ಯಾನ್ ಮಾಲಾಡಿ ಮತ್ತು ಸ್ಮೀತೇಶ್ ಬಾರ್ಯ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News