‘ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ’
ಬೆಂಗಳೂರು, ಆ.24: ಕೈಗಾರಿಕೆಗಳ ಸ್ಥಾಪನೆಗೆ ಕರ್ನಾಟಕ ಪ್ರಶಸ್ತ ತಾಣವಾಗಿದ್ದು, ಮೆಷಿನ್‌ಟೂಲ್ಸ್, ಏರೋಸ್ಪೇಸ್, ಶಿಕ್ಷಣ ಮತ್ತಿತರ ವಲಯಗಳಲ್ಲಿ ಬಂಡವಾಳ ಹೂಡಿಕೆ ಮಾಡಲು ಆಸಕ್ತಿ ಹೊಂದಿರುವುದಾಗಿ ಭಾರತದಲ್ಲಿನ ್ರಾನ್ಸ್ ರಾಯಭಾರಿ ಅಲೆಕ್ಸಾಂಡ್ರೆ ಝೇಗ್ಲರ್ ಹೇಳಿದ್ದಾರೆ.
ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಅವರು, ಹೂಡಿಕೆ ಸಂಬಂಧ ಅಕೃತ ಮಾತುಕತೆಗಾಗಿ ನಿಯೋಗದೊಂದಿಗೆ ಜನವರಿಯಲ್ಲಿ ಬರುವುದಾಗಿ ತಿಳಿಸಿದರು. ದೇ ಮೊದಲ ಬಾರಿಗೆ ಬೆಂಗಳೂರಿಗೆ ಭೇಟಿ ನೀಡಿರುವ ಅಲೆಕ್ಸಾಂಡ್ರೆ, ರಾಜ್ಯದ ಕೈಗಾರಿಕೆ ಬೆಳವಣಿಗೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಆರೋಗ್ಯ, ಇಂಧನ, ಸಾರಿಗೆ, ಆಹಾರ ಸಂಸ್ಕರಣೆ ಮತ್ತಿತರ ವಲಯಗಳಲ್ಲಿ ಬಂಡವಾಳ ಹೂಡಿಕೆ ಮಾಡುವ ಉದ್ದೇಶವಿದೆ. ಮೆಟ್ರೊ ರೈಲು ಯೋಜನೆ ವೀಕ್ಷಿಸಿದ್ದೇನೆ. ಬಂಡವಾಳ ಹೂಡಿಕೆಗೆ ಇರುವ ಎಲ್ಲ ಅವಕಾಶಗಳನ್ನು ಬಳಸಿಕೊಳ್ಳುವುದಾಗಿ ತಿಳಿಸಿದರು.ದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ, ಬೆಂಗಳೂರು ಸಿಲಿಕಾನ್ ವ್ಯಾಲಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಐಟಿ-ಬಿಟಿ ಸೇರಿದಂತೆ ಕೈಗಾರಿಕೆ ವಲಯದಲ್ಲಿ ರಾಜ್ಯ ಇಡೀ ದೇಶದಲ್ಲೆ ಉತ್ತಮ ಸಾಧನೆ ಮಾಡಿದೆ. ಬಂಡವಾಳ ಹೂಡಿಕೆ ಸಂಬಂಧ ಪ್ರಸ್ತಾವನೆ ಸಲ್ಲಿಸಿದರೆ, ಸರಕಾರ ಪ್ರೋತ್ಸಾಹ ನೀಡುವುದರ ಜೊತೆಗೆ ಸಕಲ ನೆರವು ಒದಗಿಸಲಿದೆ ಎಂದು ಹೇಳಿದರು. ೇಂದ್ರ ಸರಕಾರ ಪ್ರವಾಸಿ ಭಾರತ ದಿನ ಆಚರಿಸುತ್ತಿದ್ದು, ಇದಕ್ಕಾಗಿ ಕರ್ನಾಟಕವನ್ನು ಆಯ್ಕೆ ಮಾಡಿಕೊಂಡಿದೆ. ೆಬ್ರವರಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯು ರಾಯಭಾರಿ ಮತ್ತವರ ತಂಡಕ್ಕೆ ಆಹ್ವಾನ ನೀಡಿದರು. ಇದಕ್ಕೆ ಪ್ರತಿಯಾಗಿ ರಾಯಭಾರಿಗಳು ಮುಖ್ಯಮಂತ್ರಿಯನ್ನು ್ರಾನ್ಸ್‌ಗೆ ಬರುವಂತೆ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಉಪಸ್ಥಿತರಿದ್ದರು. ರಾಯಭಾರಿಗಳ ನೇತೃತ್ವದ ತಂಡವು ಬೆಂಗಳೂರಿನ ಐಟಿ ಪಾರ್ಕ್ ಮತ್ತು ಮೈಸೂರಿನ ವಿವಿಧ ಕಾರ್ಖಾನೆಗಳಿಗೆ ಭೇಟಿ ನೀಡಲಿದೆ.