ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಪ್ರತಿಷ್ಠಿತ ‘ಎಫ್‌ಸಿಬಿಎ-2016’ ಪ್ರಶಸ್ತಿ

Update: 2016-08-26 18:52 GMT

ಮಂಗಳೂರು, ಆ.26: ಮುಂಬೈಯ ಬ್ಯಾಂಕಿಂಗ್ ಪ್ರೋಂಟಿಯರ್ಸ್‌ ನೀಡುವ ‘ಪ್ರೋಂಟಿಯರ್ಸ್‌ ಇನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಅವಾರ್ಡ್-2016’ (ಎಫ್‌ಸಿಬಿಎ)ರ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಆಯ್ಕೆಯಾಗಿದೆ. ಎಸ್‌ಸಿಡಿಸಿಸಿ ಬ್ಯಾಂಕ್ ಸತತ ಎರಡನೆ ಬಾರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಳೆದ ಎರಡು ದಶಕಗಳಿಂದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಹಲವು ವಿನೂತನ ಯೋಜನೆಗಳ ಮೂಲಕ ಈ ಬ್ಯಾಂಕ್‌ನ್ನು ಜನಸ್ನೇಹಿ ಬ್ಯಾಂಕನ್ನಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಿದ್ದಾರೆ. 101 ಶಾಖೆಗಳಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಕೋರ್ ಬ್ಯಾಂಕಿಂಗ್‌ನಂತಹ ಉತ್ಕೃಷ್ಟ ಸೇವೆಯನ್ನು ನೀಡುತ್ತಿದೆ. ಸತತ 17 ವರ್ಷಗಳಿಂದ ರಾಜ್ಯದ ಅತ್ಯುತ್ತಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎಂದು ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ಪ್ರಶಸ್ತಿ ಹಾಗೂ 16 ವರ್ಷಗಳಿಂದ ನಬಾರ್ಡ್ ಪ್ರಶಸ್ತಿಗಳಿಂದ ಎಸ್‌ಸಿಡಿಸಿಸಿ ಬ್ಯಾಂಕ್ ಪುರಸ್ಕೃತವಾಗಿದೆ.ಸೆ.17ರಂದು ಹೊಸದಿಲ್ಲಿಯಲ್ಲಿ ನಡೆಯುವ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್‌ಗಳ ಸೆಮಿನಾರ್‌ನಲ್ಲಿ ಈ ಪ್ರಶಸ್ತಿಯನ್ನು ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಸ್ವೀಕರಿಸಲಿರುವರು ಎಂದು ಪ್ರಕಟನೆೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News