ಕೋಡಿ: ಬ್ಯಾರೀಸ್ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಸಮಾರೋಪ

Update: 2016-09-01 07:01 GMT

ಕುಂದಾಪುರ, ಸೆ.1:ಕೋಡಿಯ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಬಾಲಕ, ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ ಬುಧವಾರ ನಡೆಯಿತು.

ಸಮಾರಂಭದಲ್ಲಿ ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಬಿ ನಾಯಕ್ ವಿಜೇತರಿಗೆ ಪ್ರಶಸ್ತಿಯನ್ನು ವಿತರಿಸಿದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಮಾಸ್ಟರ್ ಮೆಹಮೂದ್ ಶುಭಹಾರೈಸಿದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಶಮೀರ್, ತಾಲೂಕು ಪದವಿ ಪೂರ್ವ ಕಾಲೇಜಿನ ಕ್ರೀಡಾ ಮೇಲ್ವಿಚಾರಕ ನಾಗರಾಜ ಶೆಟ್ಟಿ, ಕರುಣಾಕರ ಶೆಟ್ಟಿ, ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿ ರಫೀಕ್, ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್‌ನ ದೈಹಿಕ ಶಿಕ್ಷಕ ಜಪ್ ಸನ್ನಿ ಡಿಸೋಜ ಉಪಸ್ಥಿತರಿದ್ದರು.

ಬಾಲಕರ ವಿಭಾಗದಲ್ಲಿ ಬ್ಯಾರೀಸ್ ಪದವಿ ಪೂರ್ವ ಕಾಲೇಜು ಕೋಡಿ ಪ್ರಥಮ ಸ್ಥಾನ ಹಾಗೂ ದ್ವಿತೀಯ ಸ್ಥಾನವನ್ನು ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಬಸ್ರೂರು ಪಡೆದುಕೊಂಡವು. ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ತಂಡ ಮತ್ತು ದ್ವಿತೀಯ ಸ್ಥಾನವನ್ನು ಎಸ್.ವಿ. ಪದವಿ ಪೂರ್ವ ಕಾಲೇಜು ಗಂಗೊಳ್ಳಿ ತಂಡಗಳು ಪಡೆದುಕೊಂಡವು.

ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ದೈಹಿಕ ಉಪನ್ಯಾಸಕ ಪ್ರೀತೇಶ್ ಶೆಟ್ಟಿ ಸ್ವಾಗತಿಸಿದರು. ಹಾಜಿ ಕೆ. ಮೊಹಿಯುದ್ದೀನ್ ಬ್ಯಾರಿ ಸ್ಮಾರಕ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಕ ಇಲ್ಯಾಸ್ ವಂದಿಸಿದರು. ದೈಹಿಕ ಶಿಕ್ಷಕ ಪ್ರಕಾಶ್ ಬೆಳಗೊಡು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News