ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿ ಶಾಸಕ ಗಣೇಶ್ ಹುಕ್ಕೇರಿ
Update: 2016-09-08 06:16 GMT
ಬೆಂಗಳೂರು, ಸೆ.8: ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿ ಶಾಸಕ ಗಣೇಶ್ ಹುಕ್ಕೇರಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸರಳ ಸಮಾರಂಭದಲ್ಲಿ ಗಣೇಶ್‌ರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಭೋದಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಮಹದೇವ ಪ್ರಸಾದ್, ಜಯಚಂದ್ರ, ಸಂಸದ ಪ್ರಕಾಶ್ ಹುಕ್ಕೇರಿ ಉಪಸ್ಥಿತರಿದ್ದರು.