ನಗರ ಪ್ರದೇಶದಲ್ಲಿ ಆಧಾರ್ ಲಿಂಕ್ ಮಾಡದ ಪಡಿತರ ಚೀಟಿಗಳು ರದ್ದು: ಸಚಿವ ಖಾದರ್

Update: 2016-09-10 12:11 GMT

ಬೆಂಗಳೂರು, ಸೆ.10: ನಗರ ಪ್ರದೇಶದಲ್ಲಿ ಆಧಾರ್ ಲಿಂಕ್ ಮಾಡದ ಪಡಿತರ ಚೀಟಿಗಳನ್ನು ಈ ತಿಂಗಳ ಅಂತ್ಯದಲ್ಲಿ ರದ್ದು ಮಾಡಲಾಗುವುದು ಎಂದು ಆಹಾರ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಕೂಪನ್ ವಿತರಣೆಗೆ ಮೊಬೈಲ್ ಮೆಷಿನ್ ವಿತರಣೆ ಮಾಡಲಾಗುವುದು. ಮುಂದಿನ ತಿಂಗಳಿನಿಂದ ನಗರ ಪ್ರದೇಶದಲ್ಲಿ ಮೂರು ತಿಂಗಳ ಕೂಪನ್‌ಗಳನ್ನು ಒಟ್ಟಿಗೆ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಮುಂದಿನ 10 ದಿನಗಳಲ್ಲಿ ಆನ್‌ಲೈನ್ ಮೂಲಕ ಹೊಸ ಎಪಿಎಲ್ ಪಡಿತರ ಚೀಟಿ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಸೆಪ್ಟೆಂಬರ್ ಅಂತ್ಯದಲ್ಲಿ ಹೊಸ ಬಿಪಿಎಲ್ ಪಡಿತರ ಚೀಟಿ ವಿತರಣೆ ಆರಂಭಗೊಳ್ಳಲಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಹೊಸ ಪಡಿತರ ಚೀಟಿ ವಿತರಣೆ ಮತ್ತು ಪರಿಶೀಲನೆಯ ಜವಾಬ್ದಾರಿಯನ್ನು ಗ್ರಾಮ ಪಂಚಾಯತ್‌ಗಳಿಗೆ ವಹಿಸಲು ತೀರ್ಮಾನಿಸಲಾಗಿದೆ ಎಂದು ಖಾದರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮೇಲ್ಮನೆ ಸದಸ್ಯ ರಿಜ್ವಾನ್ ಅರ್ಷದ್, ಇಲಾಖೆಯ ಕಾರ್ಯದರ್ಶಿ ಹರ್ಷ ಗುಪ್ತ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News