ಕಾವೇರಿ ವಿವಾದ: ರಾಷ್ಟ್ರಪತಿಗಳ ಮೊರೆ ಹೋಗಲು ರಾಜ್ಯ ಸರಕಾರ ಚಿಂತನೆ
Update: 2016-09-21 06:52 GMT
ಬೆಂಗಳೂರು, ಸೆ.21: ಕಾವೇರಿ ನದಿ ನೀರಿನ ಹಂಚಿಕೆ ವಿವಾದದಲ್ಲಿ ಪ್ರಧಾನಮಂತ್ರಿ ಮಧ್ಯಪ್ರವೇಶಿಸದೇ ಇರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳ ಮೊರೆ ಹೋಗಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸುತ್ತಿದೆ.
ಕಾವೇರಿ ನದಿನೀರಿನ ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ಮಂಗಳವಾರ ನೀಡಿರುವ ತೀರ್ಪಿನ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಬುಧವಾರ ವಿಧಾನಸೌಧದಲ್ಲಿ ಮಂತ್ರಿ ಪರಿಷತ್ ಸಭೆ ನಡೆಸಿದರು. ಈ ಸಭೆಯಲ್ಲಿ ರಾಷ್ಟ್ರಪತಿಗಳ ಮೊರೆ ಹೋಗುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.