ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ
Update: 2016-09-30 18:28 GMT
ಬೆಂಗಳೂರು, ಸೆ.30: ಡಿಸೆಂಬರ್‌ನಲ್ಲಿ ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿರುವ 82ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ ಬಿಡುಗಡೆಗೊಳಿಸಿದ್ದಾರೆ.
ಅನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಮ್ಮೇಳನದ ಸರ್ವಾಧ್ಯಕ್ಷರ ಹೆಸರನ್ನು ಒಂದು ವಾರದೊಳಗೆ ಘೋಷಿಸಲಾಗುವುದು. ಸಾಹಿತ್ಯ ಸಮ್ಮೇಳನಕ್ಕೆ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಅನುದಾನವನ್ನು ಮುಖ್ಯಮಂತ್ರಿ ನೀಡಿದ್ದಾರೆಂದು ಹೇಳಿದರು.