ಒಂದೂವರೆ ವರ್ಷದಲ್ಲಿ 6.5ಲಕ್ಷ ಮನೆ ನಿರ್ಮಾಣ ಸಚಿವ ಎಂ.ಕೃಷ್ಣಪ್ಪ
ಬೆಂಗಳೂರು, ಅ. 11: ಮುಂದಿನ ಒಂದೂವರೆ ವರ್ಷದಲ್ಲಿ ರಾಜ್ಯದೆಲ್ಲೆಡೆ 6.5 ಲಕ್ಷ ಮನೆ ನಿರ್ಮಾಣ ಮಾಡುವ ಗುರಿ ಇದೆ ಎಂದು ವಸತಿ ಸಚಿವ ಎಂ.ಕೃಷ್ಣಪ್ಪ ಇಂದಿಲ್ಲಿ ಹೇಳಿದರು.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಆಯುಧ ಪೂಜೆ ನೆರವೇರಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ ಒಂದೂವರೆ ವರ್ಷದಲ್ಲಿ 6.5 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಇದೆ. ಅದೇ ರೀತಿ, ಬೆಂಗಳೂರಿನಲ್ಲಿ ಒತ್ತುವರಿ ತೆರವು ಮಾಡಿರುವ ಜಾಗವನ್ನು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ನೀಡಲಾಗಿದೆ. ಈ ಜಾಗದಲ್ಲಿ ನಗರದ ಬಡವರಿಗೆ 40 ಸಾವಿರ ನಿವೇಶನ ಹಂಚಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು. ್ರಾಮೀಣ ಭಾಗದಲ್ಲಿ ಸೂರಿಲ್ಲದವರಿಗೆ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಹೆಸರಿನಲ್ಲಿ 20 ಸಾವಿರ ಮನೆ ನಿರ್ಮಾಣ ಮಾಡಲಾಗುವುದು ಎಂದ ಅವರು, ಗೃಹ ಮಂಡಳಿ ಮೂಲಕ ನಗರದ ವಸತಿ ರಹಿತರಿಗೆ ನಿವೇಶನ ನೀಡುವ ಯೋಜನೆ ಹಾಕಿಕೊಳ್ಳಲಾಗಿದೆ. ಒಟ್ಟಾರೆ, ಕಳೆದ ಮೂರೂವರೆ ವರ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಎಂಟು ಲಕ್ಷ ಮನೆಗಳನ್ನು ನಿರ್ಮಿಸಿದೆ ಎಂದರು.ಎಂದು ತಿಳಿಸಿದರು.