ಕಾವೇರಿ, ಕಳಸಾ-ಬಂಡೂರಿ ಹೋರಾಟ

Update: 2016-10-13 18:51 GMT

ಬೆಂಗಳೂರು, ಅ. 13: ಕಾವೇರಿ ನದಿ ನೀರು ಹಂಚಿಕೆ ಮತ್ತು ಕಳಸಾ-ಬಂಡೂರಿ ಹೋರಾಟ ಸಂಬಂಧ ಬಂತರಾಗಿರುವ ಅಮಾಯಕರ ವಿರುದ್ಧ ದಾಖಲಿಸಿರುವ ಎಲ್ಲ ಮೊಕದ್ದಮೆಗಳನ್ನು ಬೇಷರತ್ತಾಗಿ ಹಿಂಪಡೆಯಬೇಕು ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿರುವ ತನ್ನ ಕೊಠಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಹಲವು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲು ಕಳಸಾ-ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಹೋರಾಟ ನಡೆಸಿದ ಹಲವು ರೈತರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿದ್ದು, ಅಮಾಯಕ ರೈತರು ತಮ್ಮ ನಿತ್ಯದ ಕೆಲಸ-ಕಾರ್ಯ ಬಿಟ್ಟು ಕೋರ್ಟ್‌ಗೆ ಅಲೆಯಬೇಕಾಗಿದೆ ಎಂದರು.ಳಸಾ-ಬಂಡೂರಿ ಹೋರಾಟದ ವೇಳೆ 187 ಮಂದಿ ವಿರುದ್ಧ ಸುಳ್ಳು ಮೊಕದ್ದಮೆ ಹೂಡಲಾಗಿದೆ. ಆ ಎಲ್ಲ ಮೊಕದ್ದಮೆಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ವರದಿ ಬಹಿರಂಗಕ್ಕೆ ಒತ್ತಾಯ: ಕಳಸಾ-ಬಂಡೂರಿ ಹೋರಾಟದ ವೇಳೆ ಇಲ್ಲಿನ ಯಮನೂರು ಸೇರಿದಂತೆ ವಿವಿಧೆಡೆಗಳಲ್ಲಿನ ಪೊಲೀಸ್ ದೌರ್ಜನ್ಯ ಸಂಬಂಧ ಪೊಲೀಸ್ ಅಕಾರಿ ರಾಘವೇಂದ್ರ ಔರಾದ್ಕರ್ ನೇತೃತ್ವದ ಸಮಿತಿ ವರದಿಯನ್ನು ರಾಜ್ಯ ಸರಕಾರ ಕೂಡಲೇ ಬಹಿರಂಗಪಡಿಸಬೇಕೆಂದು ಒತ್ತಾಯಿಸಿದರು.ೇಂದ್ರ ಆರಂಭಿಸಿ: ಈರುಳ್ಳಿ ಬೆಲೆ ಕುಸಿತದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೂಡಲೇ ಮಧ್ಯ ಪ್ರವೇಶಿಸಿ ಈರುಳ್ಳಿ ಪ್ರತಿ ಕ್ವಿಂಟಾಲ್‌ಗೆ 1,500 ರೂ.ನಿಂದ 2 ಸಾವಿರ ರೂ.ವರೆಗೂ ಬೆಂಬಲ ಬೆಲೆ ನೀಡಬೇಕು. ಅಲ್ಲದೆ, ಖರೀದಿ ಕೇಂದ್ರಗಳನ್ನು ಆರಂಭಿಸಬೇಕೆಂದು ಆಗ್ರಹಿಸಿದರು.
ವಿಧಾನಸೌಧ ಕಟ್ಟಡಕ್ಕೆ 60 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಒಂದು ದಿನದ ಅವೇಶನ ನಡೆಸುವ ಮೂಲಕ ಸಂಭ್ರಮಾಚರಣೆ ಮಾಡಬೇಕೆಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News