ಮುಂದಿನ ಶೈಕ್ಷಣಿಕ ವರ್ಷಾರಂಭದಲ್ಲೇ ಶೂ, ಸೈಕಲ್ ವಿತರಣೆಗೆ ಸಿಎಂ ಸೂಚನೆ
Update: 2016-10-14 07:58 GMT
ಬೆಂಗಳೂರು, ಅ.14: ಮುಂಬರುವ ಶೈಕ್ಷಣಿಕ ವರ್ಷದಿಂದ ಶಾಲೆಗಳು ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಸೈಕಲ್ ಮತ್ತು ಶೂ ವಿತರಿಸುವಂತೆ ಮುಖ್ಯಮಂತ್ರಿಗಳು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮುಂದಿನ ವರ್ಷ ವಿತರಣೆ ಮಾಡಬೇಕಿರುವ ಸಮವಸ್ತ್ರ, ಸೈಕಲ್ ಮತ್ತು ಶೂ ಖರೀದಿಗೆ ಈಗಲೇ ಟೆಂಡರ್ ಪ್ರಕ್ರಿಯೆ ಆರಂಭಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಯವರು, ಪ್ರತಿ ವರ್ಷ ಜೂನ್ ಅಂತ್ಯದ ವೇಳೆಗಾದರೂ ಸೈಕಲ್ ಮತ್ತು ಶೂಗಳನ್ನು ವಿತರಿಸುವುದು ಸೂಕ್ತ. ಇದರಲ್ಲಿ ವಿಳಂಬ ಬೇಡ ಎಂದರು.