‘ಆರೋಗ್ಯ ಭಾಗ್ಯ’ ಯೋಜನೆಗೆ ಅರ್ಜಿ ಆಹ್ವಾನ

Update: 2016-10-19 18:34 GMT


ಬೆಂಗಳೂರು, ಅ.19: ರಾಜ್ಯದ ಮಾನ್ಯತೆ ಪಡೆದ ಪತ್ರಕರ್ತರು ಮತ್ತು ಅವರ ಕುಟುಂಬದ ಸದಸ್ಯರಿಗೆ ‘ರಾಜೀವ್ ಆರೋಗ್ಯ ಭಾಗ್ಯ’ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ವಾರ್ತಾ ಇಲಾಖೆ ಸಹಯೋಗದಲ್ಲಿ ಸರಕಾರವು ಜಾರಿಗೆ ತಂದಿದ್ದು, ಯೋಜನೆಗೆ ಒಳಪಡಲಿಚ್ಛಿಸುವ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ವಾರ್ತಾ ಇಲಾಖೆಯಲ್ಲಿ ಪತ್ರಿಕಾ ಮಾನ್ಯತೆ ಹೊಂದಿರುವ ಹಾಗೂ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪತ್ರಕರ್ತರು ಮತ್ತು ಅವರ ಕುಟುಂಬದ ಸದಸ್ಯರಿಗೆ ಈ ಯೋಜನೆ ಅನ್ವಯಿಸಲಿದೆ.
    
ಯೋಜನೆಯಡಿ ಗಂಭೀರ ಹಾಗೂ ಆಘಾತಕಾರಿಯಾದ ಏಳು ನಿರ್ದಿಷ್ಟ ಕಾಯಿಲೆಗಳಿಗೆ ರಾಜ್ಯಾದ್ಯಂತ ನೋಂದಾಯಿತ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆ ಹಾಗೂ ಆರೋಗ್ಯ ಸೌಲಭ್ಯವನ್ನು ಒದಗಿಸಲಾಗುವುದು.ಯೋಜನೆಗೆ ಒಳಪಡಲಿಚ್ಛಿಸುವ ಪತ್ರಕರ್ತರು ವಾರ್ತಾ ಇಲಾಖೆಯ ವೆಬ್‌ಸೈಟ್ www.karnatakavarthe.orgನಲ್ಲಿ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಭರ್ತಿಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಆಯಾ ಜಿಲ್ಲಾ ವಾರ್ತಾಧಿಕಾರಿಗಳ ಮೂಲಕ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗೆ ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ಶಾಖೆಯ ಸಹಾಯಕ ನಿರ್ದೇಶಕರನ್ನು ಅಥವಾ ಆಯಾ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News