ಮತದಾರರ ಪಟ್ಟಿ ಪರಿಷ್ಕರಣೆ

Update: 2016-10-19 18:42 GMT

ಉಡುಪಿ, ಅ.19: ಚುನಾವಣಾ ಆಯೋಗದ ನಿರ್ದೇಶನದಂತೆ, ಉಡುಪಿ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಬೈಂದೂರು, ಕುಂದಾಪುರ, ಉಡುಪಿ, ಕಾಪು ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಮತದಾರರ ಪಟ್ಟಿಯ ಕರಡನ್ನು ಈಗಾಗಲೇ ಸಿಇಒ  (ceo.karnataka.nic.in)  ವೆಬ್‌ಸೈಟ್‌ನಲ್ಲಿ ಹಾಗೂ ಮತಗಟ್ಟೆ ಮಟ್ಟದಲ್ಲಿ ಪ್ರಕಟಿಸಲಾಗಿದೆ. ಮತದಾರರು ಈ ಮತದಾರ ಪಟ್ಟಿಯನ್ನು ಪರಿಶೀಲಿಸಿ ತಮ್ಮ ಹೆಸರು ಇರುವುದನ್ನು ದೃಢಪಡಿಸಿಕೊಳ್ಳಬೇಕು. ತಮ್ಮ ವಾಸಸ್ಥಾನ ವ್ಯಾಪ್ತಿಯ ಮತಗಟ್ಟೆಯ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದೆ ಇದ್ದಲ್ಲಿ ಹಾಗೂ 2017ರ ಜನವರಿ 1ಕ್ಕೆ 18 ವರ್ಷ ಪೂರ್ಣಗೊಳಿಸುವ ಅರ್ಹ ಭಾರತೀಯ ನಾಗರಿಕರು ಅ.1ರಿಂದ 31ರ ಅವಧಿಯಲ್ಲಿ ನಮೂದಿತ ನಮೂನೆ 6ರಲ್ಲಿ ಸಂಬಂಧಪಟ್ಟ ಕ್ಷೇತ್ರದ ಮತಗಟ್ಟೆ ಹಂತದ ಅಧಿಕಾರಿಗೆ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ವಿಳಾಸ ಇತ್ಯಾದಿಗಳಲ್ಲಿನ ಲೋಪದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಲು ನಮೂನೆ 8ರ ಅರ್ಜಿಯಲ್ಲಿ ಮತ್ತು ಮತದಾರ ಪಟ್ಟಿಯಲ್ಲಿ ಹೆಸರುಗಳನ್ನು ತೆಗೆದು ಹಾಕಲು ನಮೂನೆ 7ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಅರ್ಜಿಗಳನ್ನು ಡಿಡಿಡಿ.ಟಠಿಛ್ಟ್ಟಿಛಿಜ.ಚ್ಟ.್ಞಜ್ಚಿ.ಜ್ಞಿರಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಿ, ಅವುಗಳ ಪ್ರಿಂಟ್‌ಔಟ್‌ಗಳನ್ನು ಡೌನ್‌ಲೋಡ್ ಮಾಡಿ 7 ದಿನ ಗಳೊಳಗೆ ಜಿಲ್ಲಾ ಚುನಾವಣಾಧಿಕಾರಿ, ರಜತಾದ್ರಿ ಮಣಿಪಾಲಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಬಂದು ಸಲ್ಲಿಸಬಹುದಾಗಿದೆ.
ಯಾವುದೇ ಮತದಾರ ಎರಡು ಕಡೆ ಹೆಸರು ನೋಂದಣಿ ಮಾಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಹೆಚ್ಚಿನ ವಿವರಗಳಿಗೆ ಸ್ಥಳೀಯ ಬಿಎಲ್‌ಒ, ತಹಶೀಲ್ದಾರ, ವಿಶೇಷ ತಹಶೀಲ್ದಾರ್ ಅಥವಾ ಸಹಾಯಕ ಕಮಿಷನರ್‌ರನ್ನು ಸಂಪರ್ಕಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News