ಉತ್ತರ ಕರ್ನಾಟಕ ಅಭಿವೃದ್ಧಿಗೆ ಶೆಟ್ಟರ್ ಕೊಡುಗೆ ಶೂನ್ಯ: ಹೊರಟ್ಟಿ

Update: 2016-10-22 18:25 GMT

ಬೆಳಗಾವಿ, ಅ.22: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕೊಡುಗೆ ಶೂನ್ಯ. ಈ ಬಗ್ಗೆ ಬಹಿರಂಗ ಚರ್ಚೆಗೆ ತಾನು ಸಿದ್ಧನಿದ್ದೇನೆ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸವಾಲು ಹಾಕಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಹುಬ್ಬಳ್ಳಿಯಿಂದ ಸತತವಾಗಿ ಆಯ್ಕೆಯಾಗಿರುವ ಜಗದೀಶ್ ಶೆಟ್ಟರ್, ತಮ್ಮ ಅಕಾರಾವಯಲ್ಲಿ ಈ ಭಾಗದ ಅಭಿವೃದ್ಧಿಗೆ ಯಾವ ಕೊಡುಗೆಯನ್ನು ನೀಡಿಲ್ಲ ಎಂದು ದೂರಿದರು.ೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಸುವುದಾದರೆ ಸ್ವಾಗತ. ಅವರು ಚುನಾವಣಾ ಪ್ರಚಾರಕ್ಕೂ ಬರುವುದು ಬೇಡ, ನಾವೇ ಅವರನ್ನು ಗೆಲ್ಲಿಸಿಕಳುಹಿಸುತ್ತೇವೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News