‘ಕನ್ನಡ ಮಾಧ್ಯಮದಲ್ಲಿಪ್ರಾಥಮಿಕ ಶಿಕ್ಷಣ’ ಸರಕಾರದ ಸಂಕಲ್ಪ: ಸಿಎಂ ಸಿದ್ದರಾಮಯ್ಯ

Update: 2016-10-31 17:46 GMT

ಬೆಂಗಳೂರು, ಅ.31: ಪ್ರಾಥಮಿಕ ಹಂತದಲ್ಲಿ ಕನ್ನಡ ಮಾಧ್ಯಮ ದಲ್ಲಿಯೇ ಶಿಕ್ಷಣ ನೀಡಬೇಕೆಂಬುದು ರಾಜ್ಯ ಸರಕಾರದ ಸಂಕಲ್ಪ. ಆದರೆ, ‘ಭಾಷಾ ಮಾಧ್ಯಮವನ್ನು ಕಡ್ಡಾಯ ಮಾಡುವಂತಿಲ್ಲ, ಅದು ಮಕ್ಕಳ ಹೆತ್ತವರ ಆಯ್ಕೆ’ ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ಹಿನ್ನಡೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಯ ನ್ನುದ್ದೇಶಿಸಿ ದೂರದರ್ಶನದ ಮೂಲಕ ಭಾಷಣ ಮಾಡಿದ ಮುಖ್ಯಮಂತ್ರಿ, ಸುಪ್ರೀಂಕೋರ್ಟ್‌ನ ಈ ತೀರ್ಪು ಜಾರಿಯಾದರೆ ಕನ್ನಡವೊಂದೇ ಅಲ್ಲ, ನಮ್ಮ ಎಲ್ಲ ಪ್ರಾದೇಶಿಕ ಭಾಷೆಗಳು ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳುವ ಅಪಾಯಕ್ಕೀಡಾಗಲಿವೆ. ಇದನ್ನು ತಪ್ಪಿಸಲು ಕೇಂದ್ರ ಸರಕಾರ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿದರು.ತ್ಯ ಬಿದ್ದರೆ ಸಂವಿಧಾನಕ್ಕೆ ತಿದ್ದುಪಡಿ ಮಾಡಬೇಕಾಗುತ್ತದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಯಲ್ಲಿ ಸಮಾಲೋಚನೆ ನಡೆಸಿ ಮಾತೃ ಭಾಷೆಯ ರಕ್ಷಣೆಯ ಬಗ್ಗೆ ಸಂಘಟಿತ ಹೋರಾಟವನ್ನು ನಡೆಸಲು ನಮ್ಮ ಸರಕಾರ ಬದ್ಧವಾಗಿದೆ. ನಮ್ಮ ದೇಶದ ರಾಜ್ಯಗಳು ಭಾಷೆಗಳ ಆಧಾರದ ಮೇಲೆ ರಚಿತವಾಗಿದೆ. ಭಾಷಾವಾರು ಪ್ರಾಂತ ರಚನೆಯಲ್ಲಿ ಪ್ರಾದೇಶಿಕ ಭಾಷೆಗಳ ಸಾರ್ವಭೌಮತೆಯನ್ನು ಮನ್ನಿಸಬೇಕಾಗುತ್ತದೆ. ಜನರ ಇಂಗ್ಲಿಷ್ ಅಂದಾಭಿಮಾನ ಕನ್ನಡದ ಅಸ್ತಿತ್ವವನ್ನೇ ಅಲುಗಾಡಿಸುತ್ತಿರುವುದು ನಿಜ. ಇಂಗ್ಲಿಷ್ ಕಲಿಯದಿದ್ದರೆ ತಮ್ಮ ಮಕ್ಕಳಿಗೆ ಭವಿಷ್ಯವೇ ಇಲ್ಲ ಎನ್ನುವ ಮನೋಭಾವ ಕನ್ನಡಿಗರಲ್ಲಿ ಬೆಳೆದಿದೆ ಎಂದು ಅವರು ಹೇಳಿದರು. ಭಾಷೆಯ ಸಾವು ಎಂದರೆ ಸಂಸ್ಕೃತಿ ಮತ್ತು ಸಮುದಾಯದ ಸಾವು. ಶಿಕ್ಷಣ ಕ್ಷೇತ್ರಕ್ಕೆ ವ್ಯಾಪಾರಿ ಮನೋವೃತ್ತಿಯ ಖಾಸಗಿವಲಯದ ಪ್ರವೇಶದಿಂದ ಪ್ರಾದೇಶಿಕ ಭಾಷೆಗಳು ಅಸುರಕ್ಷತೆಯನ್ನು ಅನುಭವಿಸುತ್ತಿದೆ. ಸ್ವತಂತ್ರವಾದ ಆಲೋಚನಾ ಪದ್ಧತಿ, ಸಂಕೀರ್ಣವಾದ ಭಾವನೆಗಳ ಅಭಿವ್ಯಕ್ತಿ ಸಾಮರ್ಥ್ಯಗಳನ್ನು ಬೆಳೆಸಲು ಮಾತೃ ಭಾಷೆಯಿಂದ ಮಾತ್ರ ಸಾಧ್ಯ. ಮಹಾತ್ಮಾಗಾಂಧಿ, ಡಾ.ರಾಮ ಮನೋಹರ ಲೋಹಿಯಾ, ಸ್ವಾಮಿ ವಿವೇಕಾನಂದರು, ಮಕ್ಕಳಿಗೆ ಮಾತೃಭಾಷೆಯಲ್ಲಿಯೇ ಶಿಕ್ಷಣ ನೀಡಬೇಕೆಂದು ಪ್ರತಿಪಾದಿಸಿದ್ದಾರೆ ಎಂದು ಅವರು ತಿಳಿಸಿದರು.
ಯಾವ ಭಾಷೆಯ ಹೇರಿಕೆಯೂ ಸರಿಯಲ್ಲ. ಯಾವುದೇ ಭಾಷೆಯ ಕಲಿಕೆಯನ್ನು ತಡೆಯುವುದೂ ಸರಿಯಲ್ಲ. ಒಂದು ಘಟ್ಟದಿಂದ ಮುಂದಕ್ಕೆ ವಿದ್ಯಾರ್ಥಿಗಳು ತಮಗೆ ಬೇಕಾದ ಭಾಷೆಗಳನ್ನು ಆಯ್ದು ಕೊಂಡು ಅಭ್ಯಾಸ ಮಾಡುವ ಅವಕಾಶ ಇದ್ದೇ ಇದೆ. ಈ ಘಟ್ಟದವರೆಗೆ ಮಾತೃಭಾಷೆಯ ಹಾಗೂ ಪ್ರಾದೇಶಿಕ ಭಾಷೆಯ ಕಡ್ಡಾಯ ಶಿಕ್ಷಣ ಕೊಡುವುದು ಸರಕಾರದ ಕರ್ತವ್ಯವಾಗಿದೆ ಎಂಹೇಳಿದರು.

ಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ. ಭಾಷೆಯಲ್ಲಿ ಅದನ್ನಾಡುವ ಮನುಷ್ಯನ ಆಳವಾದ ಭಾವನೆಗಳಿರುತ್ತವೆ, ಪರಸ್ಪರ ಸಂಬಂಧಗಳಿರುತ್ತವೆ, ತನ್ನತನದ ಪ್ರಜ್ಞೆ ಇರುತ್ತದೆ. ನಮ್ಮ ಸಂಸ್ಕೃತಿ, ಇತಿಹಾಸ, ನೆಲ-ಜಲದ ಸಂಪತ್ತು ಸೇರಿದಂತೆ ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಕನ್ನಡ ಭಾಷೆ ಈ ಅಸ್ಮಿತೆಯ ಜೀವಧಾತು. ಕೇವಲ ಅಭಿಮಾನದಿಂದ ಇದರ ರಕ್ಷಣೆ ಸಾಧ್ಯವಿಲ್ಲ. ನೆಲ, ಜಲ, ಭಾಷೆಗೆ ಸಂಬಂಧಿಸಿದಂತೆ ಕರ್ನಾಟಕ ಎಲ್ಲ ಕಡೆಗಳಿಂದಲೂ ನಿರಂತರ ವಾಗಿ ಅನ್ಯಾಯ್ಕಕೀಡಾಗುತ್ತಾ ಬಂದಿದೆ ಎಂಬ ನೋವು ಕನ್ನಡಿಗರಲ್ಲಿದೆ. ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದ ಇತ್ತೀಚಿನ ವಿವಾದದಲ್ಲಿಯೂ ಇಂತಹ ನೋವು ವ್ಯಕ್ತವಾಗಿದೆ. ಸತತ ಎರಡನೆ ವರ್ಷ ಪ್ರಕೃತಿ ನಮ್ಮ ಮೇಲೆ ಮುನಿಸಿಕೊಂಡಿದೆ. ರಾಜ್ಯದ ರೈತ ಸಮುದಾಯದ ಸಂಕಷ್ಟದಲ್ಲಿದೆ. ಒಕ್ಕೂಟ ವ್ಯವಸ್ಥೆಯ ಭಾಗವಾಗಿರುವ ನಾವು ಈ ವ್ಯವಸ್ಥೆಯನ್ನು ಗೌರವಿಸುತ್ತಲೆ ನಮಗೆ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ನಡೆಸಬೇಕಾಗಿದೆ ಎಂದು ಅವರು ಹೇಳಿದರು.

ರಾಜ್ಯ ಸರಕಾರ ತನ್ನ ಆಡಳಿತದಲ್ಲಿ ಕನ್ನಡವನ್ನು ಬಳಸುವುದಕ್ಕೆ ಬದ್ಧವಾಗಿದೆ. ಮಂತ್ರಿಮಂಡಲದ ನಿರ್ಣಯಗಳು, ಮಂತ್ರಿಗಳ ಟಿಪ್ಪಣಿಗಳು, ವಿಧಾನಸಭೆಯ ಮುಂದೆ ಬರುವ ವಿಧೇಯಕಗಳು ಕನ್ನಡದಲ್ಲೇ ಇದ್ದುಬಿಟ್ಟರೆ ಕನ್ನಡ ಅನಿವಾರ್ಯವಾಗಿ ಆಡಳಿತದಲ್ಲಿ ನೆಲೆಗೊಳ್ಳುವಂತಾಗುತ್ತದೆ. ಈ ಬಗ್ಗೆ ಎಲ್ಲ ಅಧಿಕಾರಿಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.
 -ಸಿದ್ದರಾಮಯ್ಯ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News