ಎಂಎಸ್‌ಐಎಲ್ ಅಧ್ಯಕ್ಷರಾಗಿ ಬಾದರ್ಲಿ ಅಧಿಕಾರ ಸ್ವೀಕಾರ
Update: 2016-11-04 18:42 GMT
ಬೆಂಗಳೂರು, ನ.4: ರಾಯಚೂರು ಜಿಲ್ಲೆಯ ಸಿಂಧನೂರು ವಿಧಾನಸಭಾ ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ ಅವರು ಮೈಸೂರ್ ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಎಂಎಸ್‌ಐಎಲ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಜಿ.ಸಿ. ಪ್ರಕಾಶ್ ನೂತನ ಅಧ್ಯಕ್ಷರನ್ನು ಆತ್ಮೀಯವಾಗಿ ಸ್ವಾಗತಿಸಿ ಶುಭಕೋರಿದರು.