ಮಾಜಿ ಸಚಿವ ಬಸವಣ್ಯಪ್ಪರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ
Update: 2016-11-06 08:27 GMT
ಬೆಂಗಳೂರು, ನ.6: ಮಾಜಿ ಸಚಿವ ಜಿ.ಬಸವಣ್ಯಪ್ಪರ ನಿವಾಸಕ್ಕೆ ತೆರಳಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿದರು.
ಬಸವಣ್ಯಪ್ಪರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸಂತಾಪ ಸೂಚಿಸಿದ್ದಾರೆ.
ಹಿರಿಯ ರಾಜಕಾರಣಿ ಬಸವಣ್ಯಪ್ಪ ಸಮಾಜವಾದಿ ಚಳವಳಿ ಹಿನ್ನೆಲೆಯಿಂದ ಸಮಾಜ ಸೇವೆ ಆರಂಭಿಸಿದವರು. ಶಾಸಕರಾಗಿ ಸಚಿವರಾಗಿ ಜಿಲ್ಲೆಯ ಅಭಿವೃದ್ಧಿಗೆ ಅವರದೇ ಕೊಡುಗೆ ನೀಡಿದ್ದಾರೆ. ಬಸವಣ್ಯಪ್ಪ ಅವರ ನಿಧನದಿಂದ ಜಿಲ್ಲೆಯ ಒಬ್ಬ ಸಜ್ಜನ ಜನಸೇವಕನನ್ನು ಕಳೆದುಕೊಂಡಂತಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಭಗಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.