ಹಿರಿಯ ಅಥ್ಲೆಟ್ ಶಾಲಿನಿ ಶೆಟ್ಟಿಗೆ ಅಭಿನಂದನೆ

Update: 2016-11-12 14:18 GMT

ಉಡುಪಿ, ನ.12: ಉಡುಪಿ ಹಿರಿಯರ ಅಥ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆದ 22ನೆ ವರ್ಲ್ಡ್ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಗಳಿಸಿದ ಶಾಲಿನಿ ಆರ್. ಶೆಟ್ಟಿ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಶನಿವಾರ ಉಡುಪಿ ಕಿದಿಯೂರು ಹೊಟೇಲಿನ ಮಹಾಜನ ಹಾಲ್ ನಲ್ಲಿ ಆಯೋಜಿಸಲಾಗಿತ್ತು.

ಶಾಲಿನಿ ಶೆಟ್ಟಿ ಅವರನ್ನು ತುಮಕೂರು ಹಿರಿಯರ ಅಥ್ಲೆಟಿಕ್ ಅಸೋಸಿ ಯೇಶನ್ ಅಧ್ಯಕ್ಷ ಟಿ.ಕೆ. ಆನಂದ ಸನ್ಮಾನಿಸಿದರು. ಮುಖ್ಯ ಅತಿಥಿಗಳಾಗಿ ಬ್ರಹ್ಮಾವರ ಜಿ.ಎಂ.ವಿದ್ಯಾನಿಕೇತನ ಶಾಲೆಯ ಸಂಚಾಲಕ ಪ್ರಕಾಶ್‌ಚಂದ್ರ ಶೆಟ್ಟಿ, ಉದ್ಯಮಿ ಅರುಣ್ ಡಿ.ಶೆಟ್ಟಿ ಉಪಸ್ಥಿತರಿದ್ದರು.

ಸಂಸ್ಥೆಯ ಉಪಾಧ್ಯಕ್ಷ ಸೀತಾನದಿ ವಿಠಲ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತ ನಾಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ ವಂದಿಸಿದರು. ಎಚ್.ಉದಯ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News