ಬಂಟ್ವಾಳ ವ್ಯಾಪ್ತಿಯಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ

Update: 2016-11-15 17:57 GMT

ಬಂಟ್ವಾಳ, ನ. 15: ತಾಲೂಕಿನಾದ್ಯಂತ ಮಂಗಳವಾರ ಸಂಜೆ ದಿಢೀರ್ ಗಾಳಿ, ಮಿಂಚು, ಗುಡುಗು ಸಹಿತ ಧಾರಾಕಾರ ಮಳೆ ಸುರಿಯಿತು. ಸಂಜೆ ಸುಮಾರು 4:30ರ ವೇಳೆಗೆ ಗಾಳಿ ಬೀಸಲಾರಂಬಿಸಿ ಧಾರಾಕಾರ ಮಳೆ ಸುರಿಯಿತು. ಮಳೆ ನಡುವೆ ಮಿಂಚು ಹಾಗೂ ಗುಡುಗಿನ ಶಬ್ದ ಜನರನ್ನು ಒಂದಷ್ಟು ಸಮಯ ಆತಂಕಕ್ಕೀಡು ಮಾಡಿತು. ದಿಢೀರ್ ಮಳೆ ಸುರಿದಿದ್ದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಅಂಗಡಿ, ಬಸ್ ನಿಲ್ದಾಣಗಳಲ್ಲಿ ಆಶ್ರಯ ಪಡೆದುಕೊಂಡರು.

ಬಿ.ಸಿ.ರೋಡಿನ ಕೈಕಂಬದಲ್ಲಿ ಮಳೆ ನೀರು ಚರಂಡಿಯಲ್ಲಿ ಹರಿಯಲಾಗದೆ ರಸ್ತೆಯಲ್ಲಿ ನಿಂತು ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಕೆಲವೆಡೆ ರಸ್ತೆಯಲ್ಲಿ ಮಳೆನೀರು ಹರಿದ ಪರಿಣಾಮ ಪಾದಚಾರಿಗಳು ಕೂಡಾ ಸಂಕಷ್ಟಪಟ್ಟರು. ಗಾಳಿಯಿಂದ ಬಿ.ಸಿ.ರೋಡಿನಲ್ಲಿ ಮರವೊಂದರ ಕೊಂಬೆ ರಸ್ತೆಗೆ ಉರುಳಿ ಬಿದ್ದಿದ್ದು ಕೂಡಲೇ ಅದನ್ನು ತೆರವುಗೊಳಿಸಿದ್ದರಿಂದ ಸಂಚಾರಕ್ಕೆ ಯಾವುದೇ ತೊಡಕುಂಟಾಗಿಲ್ಲ. ಯಾವುದೇ ಹಾನಿ ಉಂಟಾಗಿರುವ ಬಗ್ಗೆ ವರದಿಯಾಗಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News