ಎಂಡೋ ಸಂತ್ರಸ್ತರ ಪ್ರತಿಭಟನಾ ಸಂಗಮ

Update: 2016-11-15 18:37 GMT

ಕಾಸರಗೋಡು, ನ.15: ಎಂಡೋಸಲ್ಫಾನ್ ಸಂತ್ರಸ್ತರನ್ನು ನಿರ್ಲಕ್ಷಿಸುತ್ತಿರುವುದನ್ನು ವಿರೋಧಿಸಿ ಎಂಡೋಸಲ್ಪಾನ್ ಸಂತ್ರಸ್ತ ಜನಪರ ಒಕ್ಕೂಟ ಮತ್ತೆ ಹೋರಾಟಕ್ಕೆ ಅಣಿಯಾಗಿದ್ದು, ಡಿ.9ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ತೀರ್ಮಾನಿಸಿದೆ.

  ಹೋರಾಟದ ಪೂರ್ವಭಾವಿಯಾಗಿ ಮಂಗಳವಾರ ಕಾಸರಗೋಡಿನಲ್ಲಿ ನಡೆದ ಪ್ರತಿಭಟನಾ ಸಂಗಮದಲ್ಲಿ ಈ ಬಗ್ಗೆ ನಿರ್ಧರಿಸಲಾಯಿತು.

 ಹೊಸ ಬಸ್ ನಿಲ್ದಾಣ ಪರಿಸರದಲ್ಲಿ ನಡೆದ ಸಂಗಮವನ್ನು ಹೋರಾಟಗಾರ ನಾರಾಯಣ ಪೆರಿಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಜಿಲ್ಲೆಗಾಗಮಿಸಿದ್ದರೂ ಎಂಡೋ ಸಂತ್ರಸ್ತರ ಸಮಸ್ಯೆಯತ್ತ ಗಮನಹರಿಸಿಲ್ಲ. ಎಂಡೊ ಸಂತ್ರಸ್ತರನ್ನು ಸರಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದ ಅವರು ಈ ಹಿನ್ನೆಲೆಯಲ್ಲಿ ಹೋರಾಟಕ್ಕೆ ಮುಂದಾಗಿರುವುದಾಗಿ ತಿಳಿಸಿದರು.

  ಸಂತ್ರಸ್ತರನ್ನು ಗುರುತಿಸಲು ವಿಶೇಷ ವೈದ್ಯಕೀಯ ಶಿಬಿರಗಳನ್ನು ನಡೆಸಬೇಕು, ಸಾಲ ಮನ್ನಾ ಮಾಡಬೇಕು, ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಶಿಫಾರಸುಗಳನ್ನು ಜಾರಿಗೆ ತರಬೇಕು, ಉನ್ನತ ಮಟ್ಟದ ಚಿಕಿತ್ಸೆ ಒದಗಿಸಬೇಕು ಹಾಗೂ ಅರ್ಹ ಎಲ್ಲ ಸಂತ್ರಸ್ತರಿಗೆ ಆರ್ಥಿಕ ಸಹಾಯ ನೀಡಬೇಕು ಎಂಬ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿರುವ ಹೋರಾಟ ಸಮಿತಿ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಮುನ್ನಚ್ಚರಿಕೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News