ಗಾಂಜಾ ಮಾರುತ್ತಿದ್ದ ವ್ಯಕ್ತಿ ಸೆರೆ

Update: 2016-11-16 18:48 GMT

ಕೊಣಾಜೆ, ನ.16: ಕೊಣಾಜೆ ಠಾಣಾ ವ್ಯಾಪ್ತಿಯ ಹರೇಕಳ ಗ್ರಾಮದ ನ್ಯೂಪಡ್ಪುಎಂಬಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯೊಬ್ಬನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

 ಬಂಧಿತ ಆರೋಪಿನ್ನು ಮಂಜನಾಡಿ ಗ್ರಾಮದ ಮಂಗಳಾಂತಿಯ ಮುಹಮ್ಮದ್(40)ಎಂದು ಗುರು ತಿಸಲಾಗಿದೆ. ಈತ ಹರೇಕಳದ ನ್ಯೂಪಡ್ಪು ಬಳಿ ಗಾಂಜಾ ಮಾರುತ್ತಿದ್ದಾಗ ಕೊಣಾಜೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯಿಂದ 250ಗ್ರಾಂ ಗಾಂಜಾ ಹಾಗೂ ಸ್ಕೂಟರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News