ಆ್ಯಸಿಡ್ ಸೇವಿಸಿ ಆತ್ಮಹತ್ಯೆ

Update: 2016-11-20 18:32 GMT

ಕಾರ್ಕಳ, ನ.20: ಹಿರ್ಗಾನಾ ಗ್ರಾಮದ ನವ ಜೀವನ ಕಾನ್ವೆಂಟ್ ಎಂಬಲ್ಲಿ ಸಿಸ್ಟರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಸಿಸ್ಟರ್ ಜೆನಿಫರ್(26)ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅನಾರೋಗ್ಯದಿಂದ ಖಿನ್ನತೆಗೆ ಒಳಗಾಗಿದ್ದ ಇವರು ನ.18ರಂದು ಬೆಳಗಿನ ಜಾವ ಕೋಣೆಯಲ್ಲಿ ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News