ನ.29: ಬ್ಯಾರಿ ಅಕಾಡಮಿಯ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Update: 2016-11-26 06:19 GMT

ಮಂಗಳೂರು, ನ.26: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವು ನ.29ರಂದು ನಗರದ ಅತ್ತಾವರದಲ್ಲಿರುವ ಬ್ಯಾರಿ ಸಾಹಿತ್ಯ ಅಕಾಡಮಿಯ ಕಚೇರಿಯಲ್ಲಿ ನಡೆಯಲಿದೆ.

ಅಂದು ಅಪರಾಹ್ನ 3 ಗಂಟೆಗೆ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಅಕಾಡಮಿಯ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ವಹಿಸುವರು. ಬ್ಯಾರಿ ಗಾಯನ ಹಾಗೂ ಸಾಹಿತ್ಯ ಸ್ಪರ್ಧಾ ವಿಜೇತರಿಗೆ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್.ಖಾದರ್ ಪುರಸ್ಕಾರ ಪ್ರದಾನ ಮಾಡುವರು. ಮಹಿಳೆಯರಿಗೆ ಬ್ಯಾರಿ ಬಾಷೆ ಓದುವ ಸ್ಪರ್ಧೆಯ ವಿಜೇತರಿಗೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ.ಗಫೂರ್, ಬ್ಯಾರಿ ಗಾದೆ ಹಾಗೂ ಚುಟುಕು ಸ್ಪರ್ಧಾ ವಿಜೇತರಿಗೆ ಉಳ್ಳಾಲ ಸೈಯದ್ ಮದನಿ ದರ್ಗಾ ಹಾಗೂ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಅಬ್ದುರ್ರಶೀದ್ ಹಾಗೂ ಬ್ಯಾರಿ ಭಾಷಾ ಪ್ರಬಂಧ ಸ್ಪರ್ಧಾ ವಿಜೇತರಿಗೆ ದ.ಕ.ಜಿಲ್ಲಾ ಅಹಿಂದ ಜನ ಚಳುವಳಿ ಅಧ್ಯಕ್ಷ ವಾಸುದೇವ ಬೋಳೂರು ಪುರಸ್ಕಾರ ಪ್ರದಾನ ಮಾಡಲಿರುವರು.

ಅಕಾಡಮಿಯ ಸದಸ್ಯ ಮುಹಮ್ಮದ್ ಶರೀಫ್ ನಿರ್ಮುಂಜೆ ಕಾರ್ಯಕ್ರಮದ ಸದಸ್ಯ ಸಂಚಾಲಕರಾಗಿರುತ್ತಾರೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಉಮರಬ್ಬ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News