ತೊಕ್ಕೊಟ್ಟು: ‘ಜನಾರೋಗ್ಯವೇ ರಾಷ್ಟ ಶಕ್ತಿ’ ಅಭಿಯಾನ

Update: 2016-11-27 18:36 GMT

   ಉಳ್ಳಾಲ, ನ.27: ಪ್ರತಿನಿತ್ಯ ಯೋಗ ಮಾಡುವುದರಿಂದ ಹಲವು ರೀತಿಯ ರೋಗಗಳನ್ನು ತಡೆಗಟ್ಟಬಹುದು. ಯೋಗವು ನಮ್ಮ ಜೀವನದ ಭಾಗವಾಗಬೇಕು. ಸದೃಢ ಆರೋಗ್ಯದಿಂದ ಮಾತ್ರ ಆರೋಗ್ಯವಂತ ಸಮಾಜ, ರಾಷ್ಟ ಕಟ್ಟಲು ಸಾಧ್ಯ. ಇಸ್ಲಾಮ್ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಿದೆ ಎಂದು ಪಿಎಫ್‌ಐ ಜಿಲ್ಲಾ ಸಮಿತಿಯ ಸದಸ್ಯ ಎ.ಕೆ.ಅಶ್ರಫ್ ಹೇಳಿದ್ದಾರೆ.

    ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಮಂಗಳೂರು ವತಿಯಿಂದ ‘ಜನಾರೋಗ್ಯವೇ ರಾಷ್ಟ್ರಶಕ್ತಿ’ ರಾಷ್ಟ್ರೀಯ ಅಭಿಯಾನದ ಅಂಗವಾಗಿ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ನಡೆದ ಸಭಾ ಕಾರ್ಯಕ್ರಮನ್ನುದ್ದೇಶಿಸಿ ಅವರು ಮಾತನಾಡಿದರು.

    ಅಲ್ಲದೇ ಕುತ್ತಾರ್ ಜಂಕ್ಷನ್‌ನಿಂದ ಆರಂಭಗೊಂಡು ತೊಕ್ಕೊಟ್ಟು ಜಂಕ್ಷನ್‌ವರೆಗೆ ನಡೆದ ಆಕರ್ಷಕ ಮ್ಯಾರಥಾನ್‌ಗೆ ಪಿಎಫ್‌ಐ ಜಿಲ್ಲಾಧ್ಯಕ್ಷ ಹನೀಫ್ ಕಾಟಿಪಳ್ಳ ಚಾಲನೆ ನೀಡಿದರು. ಎಸ್‌ಡಿಪಿಐ ಜಿಲ್ಲಾ ಪ್ರ. ಕಾರ್ಯದರ್ಶಿ ನವಾಝ್ ಉಳ್ಳಾಲ್ ಅತಿಥಿಯಾಗಿದ್ದರು.

ಆಸಿಫ್ ಕಿನ್ಯ ಮಾರ್ಗದರ್ಶನದಲ್ಲಿ ಯೋಗ ಪ್ರದರ್ಶನ ನಡೆಯಿತು.

ಪಿಎಫ್‌ಐ ಜಿಲ್ಲಾಧ್ಯಕ್ಷ ಹನೀಫ್ ಕಾಟಿಪಳ್ಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಿಎಫ್‌ಐ ಉಳ್ಳಾಲ ವಲಯಾಧ್ಯಕ್ಷ ಸಿದ್ದೀಕ್ ಯು.ಬಿ., ಜಿಲ್ಲಾ ಪ್ರ.ಕಾರ್ಯದರ್ಶಿ ಶರೀಫ್ ಬಜ್ಪೆ, ಶಹೀದ್ ಕಿನ್ಯ, ಅಬ್ಬಾಸ್ ಕಿನ್ಯ ಮುಂತಾದವರು ಉಪಸ್ಥಿತರಿದ್ದರು.

ಝಾಹೀದ್ ಮಲಾರ್ ಸ್ವಾಗತಿಸಿದರು. ಹಾರಿಸ್ ಮಲಾರ್ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News