ಪ.ಪೂ.ಕಾಲೇಜು ಉಪನ್ಯಾಸಕರಿಗೆ ಕಾರ್ಯಾಗಾರ

Update: 2016-12-06 18:16 GMT

ಉಡುಪಿ, ಡಿ.6: ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಸಮಾಜ ಶಾಸ್ತ್ರ ಹಾಗೂ ಅರ್ಥ ಶಾಸ್ತ್ರದ ಉಪನ್ಯಾಸಕರುಗಳಿಗೆ ವಿಷಯಾಧಾರಿತ ತರಬೇತಿ ಕಾರ್ಯಗಾರವನ್ನು ಉಡುಪಿಯ ಸೈಂಟ್ ಸಿಸಿಲೀಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೆಮವಾರ ಆಯೋಜಿಸಲಾಗಿತ್ತು.

  ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಯೋಗೇಶ್ವರ್ ರಾವ್, ಇಂದಿನ ಬದಲಾದ ಸನ್ನಿವೇಶದಲ್ಲಿ ಅರ್ಥಶಾಸ್ತ್ರ ಹಾಗೂ ಸಮಾಜಶಾಸ್ತ್ರದ ಜ್ಞಾನದ ಸಹಾಯದಿಂದ ಸಮಾಜದ ಏಳಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು. ಇದಕ್ಕಾಗಿ ಇಂತಹ ಕಾರ್ಯಗಾರಗಳ ಮೂಲಕ ಉಪನ್ಯಾಸಕರುಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಯೋಗೇಶ್ವರ್ ರಾವ್, ಇಂದಿನ ಬದಲಾದ ಸನ್ನಿವೇಶದಲ್ಲಿ ಅರ್ಥಶಾಸ್ತ್ರ ಹಾಗೂ ಸಮಾಜಶಾಸ್ತ್ರದ ಜ್ಞಾನದ ಸಹಾಯದಿಂದ ಸಮಾಜದ ಏಳಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು. ಇದಕ್ಕಾಗಿ ಇಂತಹ ಕಾರ್ಯಗಾರಗಳ ಮೂಲಕ ಉಪನ್ಯಾಸಕರುಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಬಿ. ನಾಯಕ್ ಅಧ್ಯಕ್ಷತೆ ವಹಿಸಿ ಅಗತ್ಯ ಸೂಚನೆಗಳನ್ನು ನೀಡಿದರು. ಅತಿಥೇಯ ಸಂಸ್ಥೆಯ ಪ್ರಾಂಶುಪಾಲರಾದ ಸಿಸ್ಟರ್ ಟ್ರೆಸಿಲ್ಡಾ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಕಾರ್ಯಗಾರದ ಸಂಘಟಕರಾದ ನೋಬರ್ಟ್ ಮಾರ್ಟಿಸ್, ಅಶೋಕ್‌ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಸುದರ್ಶನ್ ಸ್ವಾಗತಿಸಿದರೆ, ನಾಗರಾಜ ವೈದ್ಯ ವಂದಿಸಿದರು. ಶಂಕರ ಮಾರಾಠೆ ಕಾರ್ಯಕ್ರಮ ನಿರೂಪಿಸಿದರು.

ನಾಲ್ಕು ದಿನಗಳ ಕಾಲ ನಡೆಯುವ ಕಾರ್ಯಾಗಾರದಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ 200 ಮಂದಿ ಉಪನ್ಯಾಸಕರು ಭಾಗವಹಿಸುತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News