ಕುರ್ನಾಡು ಸರಕಾರಿ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ

Update: 2016-12-07 15:14 GMT

ಕೊಣಾಜೆ, ಡಿ.7 : ಕಾಲೇಜಿನಲ್ಲಿ ಕಲಿಯುವ ವಿದ್ಯಾರ್ಥಿಗಳ ಕಣ್ಣುಗಳು ಪ್ರಕಾಶಿಸಿದರೆ ಮಾತ್ರ ಮುಂದೆ ಭಾರತ ಪ್ರಕಾಶಿಸಲಿದೆ. ಭವ್ಯ ಭಾರತದ ಭವಿಷ್ಯ ವಿದ್ಯಾರ್ಥಿಗಳಲ್ಲಿ ಅಡಗಿದೆ ಎಂದು ಆಹಾರ ಹಾಗೂ ನಾಗರೀಕ ಪೂರೈಕೆ ಸಚಿವ ಯು.ಟಿ. ಖಾದರ್ ಅಭಿಪ್ರಾಯಪಟ್ಟರು.

 ಮುಡಿಪಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

 ಭವಿಷ್ಯದಲ್ಲಿ ಎದುರಾಗುವ ಸಮಸ್ಯೆಗಳನ್ನು ಸವಾಲುಗಳನ್ನು ನಿಭಾಯಿಸಲು ನಮ್ಮ ಶಿಕ್ಷಣ ಸಹಾಯವಾಗಬೇಕು. ಆರ್ಥಿಕ ಸಮಸ್ಯೆ ಎಲ್ಲರಿಗೂ ಇದೆ. ಜೀವನದುದ್ದಕ್ಕೂ ನಮ್ಮಲ್ಲಿ ತಾಳ್ಮೆ ಅಗತ್ಯ. ಸಾಮಾಜಿಕ ಸಬಲೀಕರಣ, ರಾಜಕೀಯ ಸಬಲೀಕರಣದ ಜೊತೆಗೆ ಆರ್ಥಿಕ ಸಬಲೀಕರಣ ಅಗತ್ಯ. ಆರ್ಥಿಕ ಸಬಲೀಕರಣಕ್ಕೆ ಶಿಕ್ಷಣ ಅತ್ಯಗತ್ಯ ಎಂದರು.

 ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್.ಗಟ್ಟಿ ಮಾತನಾಡಿ , ಕುರ್ನಾಡು ಕಾಲೇಜಿನಲ್ಲಿರುವ ಎರಡು ಸಾವಿರ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಕಾಲೇಜಿನಲ್ಲಿ ಕೊಳವೆ ಬಾವಿ ತೋಡಲು ಅನುದಾನ ಮಂಜೂರು ಮಾಡಿಸುತ್ತೇನೆ ಎಂದರು.

 ಬಂಟ್ವಾಳ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ್ ಪಿ. ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್, ಸದಸ್ಯ ನವೀನ್ ಪಾದಲ್ಪಾಡಿ, ಮಾಜಿ ಸದಸ್ಯ ಉಮ್ಮರ್ ಪಜೀರು, ಕುರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಮಿತ್ತಕೋಡಿ, ಮಾಜಿ ಅಧ್ಯಕ್ಷ ಪ್ರಶಾಂತ್ ಕಾಜವ, ಕಾಲೇಜಿನ ಮಾಜಿ ದೈಹಿಕ ಶಿಕ್ಷಕ ಶೀನ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಅಬ್ಬಾಸ್, ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಬೋಳಿಯಾರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ ಶೆಟ್ಟಿ, ನಾಸಿರ್ ನಡುಪದವು, ಅಬ್ದುಲ್ ಜಲೀಲ್ ಮೋಂಟುಗೋಳಿ, ಕುರ್ನಾಡು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸೂಪಿಕುಂಞ ಹಾಗೂ ಬಶೀರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರೌಢಶಾಲೆ ಹಾಗೂ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ನಗದು ನೀಡಿ ಗೌರವಿಸಲಾಯಿತು.

 ಪ್ರಾಂಶುಪಾಲ ಅಶ್ಪಕ್ ಅಹ್ಮದ್ ಮ್ಯಾಗೇರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News