ಆಸ್ಪತ್ರೆಯಲ್ಲಿ ಮಹಿಳೆ ಆತ್ಮಹತ್ಯೆ

Update: 2016-12-11 17:20 GMT

ಕುಂದಾಪುರ, ಡಿ.11: ವಿಷ ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

 ಮೃತರನ್ನು ಶಿರೂರು ಗ್ರಾಮದ ಜೋಗೂರು ರೋಡ್ ಬುಕಾರಿ ಕಾಲೊನಿ ನಿವಾಸಿ ಜಿ.ಎಂ.ಮೊಹಿದ್ದಿನ್ ಎಂಬವರ ಪತ್ನಿ ಫಾತಿಮಾ ರೊಹಾರಾ(29) ಎಂದು ಗುರುತಿಸಲಾಗಿದೆ.

ಇವರು ವೈಯಕ್ತಿಕ ಕಾರಣದಿಂದ ಮನನೊಂದು ಡಿ.6ರಂದು ರಾತ್ರಿ 9ಗಂಟೆ ಸುಮಾರಿಗೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರವಾಗಿ ಅಸ್ವಸ್ಥಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಡಿ.10ರಂದು ಸಂಜೆ ವೇಳೆ ಆಸ್ಪತ್ರೆಯ ಶೌಚಾಲಯ ದಾರಂದಕ್ಕೆ ತನ್ನ ಚೂಡಿದಾರದ ಶಾಲನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News